ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಪ್ರಾಥಮಿಕ ಶಿಕ್ಷಣ ರಾಷ್ಟ್ರೀಕರಣಕ್ಕೆ ಶಿಕ್ಷಕರ ಸಂಘ ಆಗ್ರಹ

Mainashree
Updated On : 14 Sept 2013, 9:17 am

ಕ.ಪ್ರ. ವಾರ್ತೆ೤ ಹಾಸನ೤ ಸೆ.14
ಏಕರೂಪ ಶಿಕ್ಷಣ ಜಾರಿ ಹಾಗೂಪ್ರಾಥಮಿಕ ಶಿಕ್ಷಣವನ್ನು ರಾಷ್ಟ್ರೀಕರಣಗೊಳಿಸುವಂತೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಸನ ಘಟಕದ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಶಿವೇಗೌಡ ಮಾತನಾಡಿ, ಶಿಕ್ಷಣದ ಗುಣಮಟ್ಟ ಹೆಚ್ಚಿಸುವಲ್ಲಿ ಶಿಕ್ಷಣ ಇಲಾಖೆ ಸರ್ಕಾರ ಜಾರಿಗೊಳಿಸಿರುವ ನಾನಾ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸುತ್ತಿದೆ. ಕ್ಷೀರ ಭಾಗ್ಶ, ಅಕ್ಷರದಾಸೋಹ, ನಿರಂತರ ವ್ಯಾಪಕ ಮಾಪನ, ನಲಿಕಲಿ, ಕೇಳಿಕಲಿ, ಕಲಿಕೋತ್ಸವ, 1ನೇ ತರಗತಿಯಿಂದ ಇಂಗ್ಲಿಷ್ ಕಲಿಕೆ ಸೇರಿದಂತೆ ಇತರೆ ಯೋಜನೆಗಳಲ್ಲಿ ಶಿಕ್ಷಕರು ಸಕ್ರಿಯವಾಗಿ ತೊಡಗಿಸಿಕೊಂಡು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಕಡೆ ಶ್ರಮಿಸುತ್ತಿದ್ದೇವೆ.  ಆದರೆ ಸರ್ಕಾರಿ ಶಾಲೆಗಳಲ್ಲಿ  ಮಕ್ಕಳ ದಾಖಲಾತಿಯು ದಿನೇ ದಿನೇ ಕ್ಷೀಣಿಸುತ್ತಿದ್ದು, ಅದಕ್ಕೆ ಕಾರಣವನ್ನು ಪೋಷಕರಿಂದ, ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಿದಾಗ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಆಂಗ್ಲಮಾಧ್ಯಮ ಇರದಿರುವುದಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಆಯ್ದ ಕೆಲವು ನಗರದ ಸರ್ಕಾರಿ ಶಾಲೆಗಳಿಗೆ 1ನೇ ತರಗತಿಯಿಂದಲೇ ಆಂಗ್ಲಮಾಧ್ಯಮದ ಶಾಲೆಗಳನ್ನು ನೀಡಿದರೆ ಮಕ್ಕಳನ್ನು ದಾಖಲಿಸುವುದಾಗಿ ಪೋಷಕರು ಹೇಳುತ್ತಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಕ್ರಮಕೈಗೊಳ್ಳಬೇಕಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement