ರಸ್ತೆ ಒತ್ತುವರಿ ತೆರವುಗೊಳಿಸಿದ ಪೊಲೀಸರು
ಹಾಸನ: ನಗರದ ಎನ್.ಆರ್.ವೃತ್ತದಿಂದ ಹೊಳೆನರಸೀಪುರಕ್ಕೆ ಹೋಗುವ ಮಾರ್ಗದಲ್ಲಿ ವಾಹನಗಳ ನಿಲುಗಡೆಗಾಗಿ ರಸ್ತೆ ಒತ್ತುವರಿ ಮಾಡಿಕೊಂಡಿದ್ದನ್ನು ಶನಿವಾರ ಪೊಲೀಸರು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ಈ ವೃತ್ತದ ಸಮೀಪ ರಸ್ತೆ ಒತ್ತುವರಿ ಆಗಿದ್ದರಿಂದ ದ್ವಿಚಕ್ರ ವಾಹನಗಳನ್ನು ರಸ್ತೆಯಲ್ಲಿಯೇ ನಿಲ್ಲಿಸುತ್ತಿದ್ದರು. ಇದರಿಂದ ವಾಹನ ಸಂಚಾರಕ್ಕೆ ತೀರಾ ಅಡಚಣೆ ಉಂಟಾಗುತ್ತಿತ್ತು. ಶನಿವಾರ ಸಂಚಾರಿ ಪೊಲೀಸರು ಜೆಸಿಬಿ ಯಂತ್ರಗಳ ಮೂಲಕ ಒತ್ತುವಾರಿಯಾಗಿದ್ದ ರಸ್ತೆ ಜಾಗವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.