ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಸುದ್ದಿ ಸಂಕ್ಷೇಪ

Mainashree
Updated On : 14 Sept 2013, 9:18 am

ಇಂದು ಸರ್‌ಎಂವಿ ಜನ್ಮ ದಿನಾಚರಣೆ
ಹಾಸನ: ಎಸ್‌ಬಿಎಂ ಸಂಸ್ಥಾಪಕ, ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯನವರ 152ನೇ ಜನ್ಮ ದಿನಾಚರಣೆ ಅಂಗವಾಗಿ ಸೆ. 15 ರಂದು  ಬೆಳಗ್ಗೆ 9.15ಕ್ಕೆ  ಅವರ ಪ್ರತಿಮೆಗೆ  ಮಾಲಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಾಸನ ಮಲ್ನಾಡ್ ಕಾಲೇಜ್ ಆಫ್ ಎಂಜಿನಿಯರಿಂಗ್ ಪ್ರಾಂಶುಪಾಲ ಎಂ.ವಿ.ಸತ್ಯನಾರಾಯಣ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಇಂದು ಕಾಂಕ್ರಿಟ್ ರಸ್ತೆ ಉದ್ಘಾಟನೆ
ಹಾರನಹಳ್ಳಿ: ಸಮೀಪದ ದೊಡ್ಡ ಕಲ್ಲೇಶ್ವರ ಸ್ವಾಮಿ ದೇವಾಲಯಕ್ಕೆ ನಿರ್ಮಾಣವಾಗಿರುವ ಕಾಂಕ್ರಿಟ್ ರಸ್ತೆಯನ್ನು ಶಾಸಕ ಕೆ.ಎಂ.ಶಿವಲಿಂಗೇಗೌಡ ಸೆ.15ರಂದು ಉದ್ಘಾಟಿಸಲಿದ್ದಾರೆ. ತಿಪಟೂರು ಷಡಾಕ್ಷರಿ ಮಠದ  ರುದ್ರಮುನಿ ಮಹಾಸ್ವಾಮಿಗಳ ಸಾನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಪಂ ಉಪಾಧ್ಯಕ್ಷ ಬಿಳಿಚೌಡಯ್ಯ, ತಾಪಂ ಅಧ್ಯಕ್ಷ ಎಚ್.ಟಿ.ಶಿವಮೂರ್ತಿ ಭಾಗವಹಿಸಲಿದ್ದಾರೆ. ಜೇನುಶ್ರೀ ವಿವಿಧೋದ್ದೇಶ ಸಹಕಾರ ಸಂಘವು ತನ್ನ ನಾಲ್ಕನೇ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ಈ ಕಾರ್ಯವನ್ನು ಹಮ್ಮಿಕೊಂಡಿದೆ. ವಾರ್ಷಿಕ ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎಚ್.ಬಿ.ರಾಜಣ್ಣ ವಹಿಸಲಿದ್ದಾರೆಂದು ಕಾರ್ಯದರ್ಶಿ ಎಚ್.ಸಿ.ಪರಮೇಶ್ ತಿಳಿಸಿದ್ದಾರೆ.
ಇಂದು ತರಬೇತಿ
ಹಾಸನ: ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಆಶ್ರಯದಲ್ಲಿ ಬ್ಯಾಂಕ್‌ಗಳಲ್ಲಿ ಕ್ಲರ್ಕ್ ಹುದ್ದೆಗೆ ಪೂರ್ವಭಾವಿಯಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲು ನಿರ್ಧರಿಸಿದ್ದು, ಜಿಲ್ಲೆಯ ಪದವೀಧರರು ಈ ಪರೀಕ್ಷೆಗೆ ಅರ್ಜಿ ಹಾಕಿರುವವರು ಹೆಸರು ನೋಂದಾಯಿಸಲು ಹಾಗೂ ನೋಂದಾಯಿಸದವರು ಸೆ. 15 ರಂದು  ಮಧ್ಯಾಹ್ನ 3ಕ್ಕೆ  ನಗರದ ಕಸಾಪ ಭವನದಲ್ಲಿ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜಿಲ್ಲಾ ಎಸ್ಪಿ ರವಿ ಡಿ.ಚನ್ನಣ್ಣನವರ್ ಶಿಬಿರ ಉದ್ಘಾಟಿಸುವರು ಎಂದು ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ  ಪರಮಶಿವಯ್ಯ  ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement