ಕ್ರೀಡಾಕೂಟ: ಭವ್ಯಗೆ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ
ಕನ್ನಡಪ್ರಭ ವಾರ್ತೆ ಅರಸೀಕೆರೆ ಸೆ.15
ಇತ್ತೀಚೆಗೆ ಮುಕ್ತಾಯಗೊಂಡ ಪದವಿ ಪೂರ್ವ ಕಾಲೇಜು ಮಟ್ಟದ ಕ್ರೀಡಾಕೂಟದಲ್ಲಿ ಹೊಯ್ಸಳೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ವೈ.ಎನ್.ಭವ್ಯ ಗುಂಡು ಎಸೆತ, ಡಿಸ್ಕಸ್ ಥ್ರೋ ಹಾಗೂ ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಕಾಲೇಜಿಗೆ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ ತಂದುಕೊಟ್ಟು, ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಅರ್ಹತೆ ಪಜೆದಿದ್ದಾರೆ. ಭವ್ಯಾಳ ಕ್ರೀಡಾ ಸಾಧನೆ ಗುರುತಿಸಿ ಆಕೆಗೆ ವೈಯಕ್ತಿಕ ಟ್ರೋಫಿಯನ್ನು ಪ್ರಾಂಶುಪಾಲ ಎಚ್.ಎನ್.ಈಶ್ವರಪ್ಪ ವಿತರಿಸಿ, ಕ್ರೀಡಾಕ್ಷೇತ್ರದಲ್ಲಿ ಇನ್ನಷ್ಟು ಉತ್ತಮ ಸಾಧನೆ ಗೈಯ್ಯುವಂತೆ ಪ್ರೋತ್ಸಾಹಿಸಿದರು.