'ತೇಜಸ್ವಿ ಸಾಹಿತ್ಯ ಓದುವ ಮೂಲಕ ನಿಸರ್ಗ ಅರಿಯೋಣ'
ಕನ್ನಡಪ್ರಭ ವಾರ್ತೆ ಹಾಸನ ಸೆ.15
ನಗರದ ವೈದ್ಯಕೀಯ ಮಹಾವಿದ್ಯಾಲಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಪೂರ್ಣಚಂದ್ರ ತೇಜಸ್ವಿ 75ನೇ ಜನ್ಮ ದಿನಾಚರಣೆ ನೆನಪಿನ ಸಪ್ತಾಹ ಕಾರ್ಯಕ್ರಮವನ್ನು ಮಹಾವಿದ್ಯಾಲಯದ ನಿರ್ದೇಶಕ ರಾಚೇಗೌಡ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿರುವ ತೇಜಸ್ವಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ತೇಜಸ್ವಿಯವರ ಸಾಹಿತ್ಯವನ್ನು ವಿದ್ಯಾರ್ಥಿಗಳು ಓದುವ ಮೂಲಕ ವೈಚಾರಿಕತೆ ಮತ್ತು ನಿಸರ್ಗವನ್ನು ಅರಿಯಬೇಕು. ಓದುವುದರ ಜತೆಯಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು. ಹಾಗೂ ಕನ್ನಡ ಭಾಷೆ, ನುಡಿ ಎಂದೂ ಮರೆಯಬಾರದು. ನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕೆಂದು ಕಿವಿಮಾತು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಲ್. ಜನಾರ್ದನ್, ಎವಿಕೆ ಕಾಲೇಜಿನ ಪ್ರಾಧ್ಯಾಪಕ ಎಚ್.ಎಲ್. ಮಲ್ಲೇಶಗೌಡ, ವಾರ್ತಾ ಮತ್ತು ಪ್ರಚಾರ ಇಲಾಖೆ ಸಹಾಯಕ ನಿರ್ದೇಶಕ ವಿನೋದ್ಚಂದ್ರ, ಕಸಾಪ ತಾಲೂಕು ಅಧ್ಯಕ್ಷ ಮಮತೇಶ್ ಇತರರು ಇದ್ದರು. ರಾಘವೇಂದ್ರ ಪ್ರಾರ್ಥಿಸಿದರು. ಶ್ವೇತ ಸ್ವಾಗತಿಸಿದರು.