ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಕಾಂಗ್ರೆಸ್‌ನಿಂದ ಜಿಲ್ಲೆ ನಿರ್ಲಕ್ಷ್ಯ: ಬಿಜೆಪಿ ಅಧ್ಯಕ್ಷರ ಆರೋಪ

Mainashree
Updated On : 16 Sept 2013, 8:49 am

ಬೇಲೂರು: ಆಡಳಿತರೂಢಾ ಕಾಂಗ್ರೆಸ್ ಪಕ್ಷ ಜಿಲ್ಲೆಯನ್ನು ಸಂಪೂರ್ಣ ನಿರ್ಲಕ್ಷ್ಯಿಸಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ರೇಣುಕುಮಾರ್ ಆರೋಪಿಸಿದರು.
ಇತ್ತೀಚೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 6 ತಿಂಗಳಿನಿಂದ ಜಿಲ್ಲೆಗೆ ಭೇಟಿ ನೀಡದಿದ್ದ ಜಿಲ್ಲಾ ಉಸ್ತುವಾರಿ ಸಚಿವರು ಬುಧವಾರ ಜಿಲ್ಲೆಗೆ ಭೇಟಿ ನೀಡಿದ್ದರು. ಅದರೆ ಇಲ್ಲಿಯವರೆಗೆ ಅಭಿವೃದ್ಧಿ ಬಗ್ಗೆ ಗಮನಹರಿಸಿಲ್ಲ. ಅವರಿಗೆ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಅಸಕ್ತಿ ಇಲ್ಲದಿದ್ದರೆ ಕೂಡಲೇ ಬದಲಾವಣೆ ಮಾಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಿ. ಜಿಲ್ಲೆಯ ಹಲವು ಗ್ರಾಮೀಣ ರಸ್ತೆಗಳು ಹಾಳಾಗಿದ್ದು ಸಂಚಾರಕ್ಕೆ ಯೋಗ್ಯವಾಗಿಲ್ಲ. ಆದರೆ ಇದೇ ರಸ್ತೆಗಳಲ್ಲಿ ಸಂಚರಿಸುವ ಜನಪ್ರತಿನಿಧಿಗಳು ಏಕೆ ಗಮನಹರಿಸುತ್ತಿಲ್ಲ ಎಂಬುದು ತಿಳಿಯುತ್ತಿಲ್ಲ ಎಂದು ಹೇಳಿದರು. ಕೆಎಸ್‌ಆರ್‌ಟಿಸಿ ಬಸ್ ಇಲ್ಲಿನ ಕೆರೆಗೆ ಬಿದ್ದು ಹಲವರು ಪ್ರಾಣ ಕಳೆದು ಕೊಂಡರೂ ಇಲ್ಲಿಯವರೆಗೂ ಜಿಲ್ಲಾ ಉಸ್ತುವಾರಿ ಸಚಿವರು ನೊಂದವರ ಮನೆಗೆ ಮತ್ತು ಸ್ಥಳಕ್ಕೆ ಭೇಟಿ ನೀಡಿಲ್ಲ. ಜಿಲ್ಲೆಯ ಜಲಾಶಯಗಳು ಭರ್ತಿಯಾದರೂ ಬಾಗಿನ ಅರ್ಪಿಸಲು ಮುಂದಾಗಿಲ್ಲ. ಆದರೆ ಸಂಸ್ಕೃತಿ ಉಳಿಸುವ ನಿಟಿನಲ್ಲಿ ಕೆಲ ಸಂಘಟನೆಗಳು ಹೇಮೆಗೆ ಬಾಗಿನ ಅರ್ಪಿಸಿದರೆ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಪ್ರಕರಣ ದಾಖಲು ಮಾಡಲಾಗಿದೆ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಸರ್ಕಾರ ಗಮನ ಹರಿಸದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಉಸ್ತುವಾರಿ ಸಚಿವರಿಗೆಜಿಲ್ಲೆಯ ಅಭಿವೃದ್ಧಿ ಬಗ್ಗೆ ಅಸಕ್ತಿ ಇಲ್ಲದಿದ್ದರೆ ಕೂಡಲೇ ಬದಲಾವಣೆ ಮಾಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಿ.
-  ರೇಣುಕುಮಾರ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement