ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ತಾಲೂಕು ಕಚೇರಿ, ವಿದ್ಯಾರ್ಥಿ ನಿಲಯ ಪರಿಶೀಲಿಸಿದ ಡಿಸಿ

Srinivasa Murthy VN
Updated On : 19 Sept 2013, 10:11 am

ಕ.ಪ್ರ.ವಾರ್ತೆ ಹೊಳೆನರಸೀಪುರ ಸೆ.19
ಜಿಲ್ಲಾಧಿಕಾರಿ ಅನ್ಬುಕುಮಾರ್ ಅವರು ಬುದವಾರ ಪಟ್ಟಣಕ್ಕೆ ದಿಢೀರ್ ಭೇಟಿ ನೀಡಿ, ಇಲ್ಲಿನ ತಾಲೂಕು ಕಚೇರಿ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯ, ಹಳೇಕೋಟೆ ಹಾಗೂ ಮೊಸಳೆ  ಹೊಸಹಳ್ಳಿಯ ಜನಸ್ನೇಹಿ ಕೇಂದ್ರ ಪರಿಶೀಲಿಸಿದರು.
ಮೊದಲಿಗೆ ತಾಲೂಕು ಕಚೇರಿಯಲ್ಲಿನ ಎಲ್ಲಾ ಶಾಖೆಗಳಿಗೂ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿ ತಹಸೀಲ್ದಾರ್ ಅವರಿಗೆ ಕೆಲವು ಸೂಚನೆ ನೀಡಿದರು. ನಂತರ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಮೆಟ್ರಿಕ್ ಪೂರ್ವ ಹಾಗೂ ಬಾಲಕಿಯರ ವಿದ್ಯಾರ್ಥಿ  ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯರಿಂದ ಕುಂದು ಕೊರತೆ ಆಲಿಸಿದರು. ವಿದ್ಯಾರ್ಥಿ ನಿಲಯದ ಅಡುಗೆ ಕೋಣೆಗೆ ತೆರಳಿ ಅಲ್ಲಿಯ ಸ್ವಚ್ಛತೆ ಹಾಗೂ ಊಟದ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದರು. ಹಾಗೂ ನೂತನವಾಗಿ ನಿರ್ಮಾಣವಾಗುತ್ತಿರುವ ವಿದ್ಯಾರ್ಥಿ ನಿಲಯದ ಕೊಠಡಿಗಳನ್ನು ಶೀಘ್ರವಾಗಿ ಸಂಪೂರ್ಣಗೊಳಿಸಲು ಸೂಚಿಸಿದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿ, ವಿದ್ಯಾರ್ಥಿ ನಿಲಯಕ್ಕೆ ಪಿಡಿಎಸ್‌ನಿಂದ 7.19 ರು.ಗೆ ಅಕ್ಕಿಯನ್ನು ನೀಡಲಾಗುತ್ತಿದೆ. ಮೆಟ್ರಿಕ್ ಪೂರ್ವ ಪ್ರತಿ ವಿದ್ಯಾರ್ಥಿಗೆ ಮಾಸಿಕ 750 ರಿಂದ 900 ರು. ಗಳಿಗೆ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ  850 ರು.ನಿಂದ 1000 ರು.ಗೆ  ಏರಿಕೆ ಮಾಡಲಾಗಿದೆ. ವಿದ್ಯಾರ್ಥಿ ನಿಲಯಗಳಿಗೆ ಸಂಬಂಧಪಟ್ಟಂತೆ ಯಾವುದೇ ದೂರುಗಳು ಬಂದಲ್ಲಿ ತಕ್ಷಣ ಕ್ರಮ ಜರುಗಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಶಿವಶಂಕರಪ್ಪ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ನಾಗರಾಜ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ರಂಗರಾಜು ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement