ಇಂದು ಕ್ಯಾನ್ಸರ್ ಉಚಿತ ತಪಾಸಣೆ
ಹಾಸನ: ಮೈಸೂರಿನ ಭಾರತ್ ಆಸ್ಪತ್ರೆ ಮತ್ತು ಗ್ರಂಥಿ ಸಂಸ್ಥೆ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಆಶ್ರಯದಲ್ಲಿ ವಿಶೇಷವಾಗಿ ಬಿಪಿಎಲ್ ಕಾರ್ಡ್ದಾರರಿಗೆ ವಾಜಪೇಯಿ ಆರೋಗ್ಯ ಶ್ರೀ ಯೋಜನೆಯಡಿಯಲ್ಲಿ ನಗರದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ತಜ್ಞ ವೈದ್ಯರಿಂದ ಸೆ. 21 ರಂದು ಬೆಳಗ್ಗೆ 10 ರಿಂದ ಕ್ಯಾನ್ಸರ್ ಉಚಿತ ಪಾಸಣಾ ಶಿಬಿರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಏರ್ಪಡಿಸಲಾಗಿದೆ. ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯಲು ಕೋರಿದೆ. ಮಾಹಿತಿಗಾಗಿ ಮೊ. 9343288726 ಸಂಪರ್ಕಿಸಿ.
ನಾಳೆ ಸಂಸ್ಕೃತೋತ್ಸವ ಉದ್ಘಾಟನೆ
ಹಾಸನ: ಚಿಕ್ಕಮಗಳೂರು, ಹಾಸನ, ಉಡುಪಿ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಕೃತ ಪಾಠಶಾಲಾ ಶಿಕ್ಷಕರ ಸಂಘದ ವತಿಯಿಂದ ಸೆ. 22 ರಂದು ಬೆಳಗ್ಗೆ 11ಕ್ಕೆ ಸಂಸ್ಕೃತೋತ್ಸವ ನಗರದ ಸಂಸ್ಕೃತಂ ಭವನದಲ್ಲಿ ಏರ್ಪಡಿಸಲಾಗಿದೆ. ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಸಾನಿಧ್ಯ ವಹಿಸುವರು. ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿವಿ ಕುಲಪತಿ ಮಲ್ಲೇಪುರಂ ಜಿ.ವೆಂಕಟೇಶ್ ಅಧ್ಯಕ್ಷತೆ ವಹಿಸುವರು. ಸಂಸ್ಕೃತಂ ಅಧ್ಯಕ್ಷ ಎಚ್.ಪಿ.ಮೋಹನ್ ಉದ್ಘಾಟಿಸುವರು. ಎಸ್ಡಿಎಂಸಿ ಪ್ರಾಂಶುಪಾಲ ಡಾ.ಪ್ರಸನ್ನ ಎನ್. ರಾವ್ ಉಪನ್ಯಾಸ ನೀಡುವರು.
ಲಾಡ್ಜ್ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಹಾಸನ: ಲಾಡ್ಜ್ನಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದಲ್ಲಿ ಶುಕ್ರವಾರ ನಡೆದಿದೆ.
ಚಿಕ್ಕಮಗಳೂರು ಮೂಲದ ಕೇಶವ (40) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಕೇಶವ ನಗರದ ಬಿ.ಎಂ.ರಸ್ತೆಯ ಲಾಡ್ಜ್ವೊಂದರಲ್ಲಿ ರೂಮ್ ಮಾಡಿಕೊಂಡಿದ್ದರು.
ವ್ಯಕ್ತಿಯ ಆತ್ಮಹತ್ಯೆಗೆ ಕಾರಣ ಏನಂದು ತಿಳಿದು ಬಂದಿಲ್ಲ. ಬಡಾವಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.