ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ಜನಾರೋಗ್ಯಕ್ಕಾಗಿ ಆಯುರ್ವೇದ' ಕುರಿತು ಉಪನ್ಯಾಸ

Srinivasa Murthy VN
Updated On : 25 Sept 2013, 11:45 am

ಉದಯಪುರ (ಚನ್ನರಾಯಪಟ್ಟಣ ತಾ.): ಮೈಸೂರು ವಿಶ್ವವಿದ್ಯಾನಿಲಯ ಹಾಗೂ  ಉದಯಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ನಡೆಯುತ್ತಿರುವ ಹಾಸನ ಜಿಲ್ಲಾ ಮಟ್ಟದ ವಿಶೇಷ ಶಿಬಿರದಲ್ಲಿ ಹಾಸನದ ಮಂಜುನಾಥ ಆಯುರ್ವೇದ ಮಹಾ ವಿದ್ಯಾಲಯ ಹಾಗೂ ಆಸ್ಪತ್ರೆಯಿಂದ ಉಚಿತ ಆರೋಗ್ಯ ತಪಾಸಣ ಶಿಬಿರ ನಡೆದು ಔಷಧಿಗಳನ್ನು ಉಚಿತ ವಿತರಿಸಲಾಯಿತು.
ತೆರಣ್ಯ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಬಿರದ ಸದುಪಯೋಗ ಪಡೆದುಕೊಂಡರು. ಶಿಬಿರಾರ್ಥಿಗಳಿಗೆ ಸೌಹಾರ್ದಯುತ ವಾಲಿಬಾಲ್ ಪಂದ್ಯಾವಳಿಗಳನ್ನು ಸಹ ಶಿಬಿರಾಧಿಕಾರಿ ನಂಜುಂಡ ಮತ್ತು  ಈ.ಮಧುಸೂದನ್ ನಡೆಸಿಕೊಟ್ಟರು. ಪಂದ್ಯಾವಳಿಯಲ್ಲಿ ಭೀಮಾ ತಂಡ ಪ್ರಥಮ ಮತ್ತು ಶರಾವತಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ತೆರಣ್ಯ ಗ್ರಾಮದ ಯುವಕರು ಉತ್ಸಹದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ರಾಜಗೋಪಾಲ್ ಡೆಂಗ್ಯೂ ಜ್ವರ ಮತ್ತು ಅದರ ನಿಯಂತ್ರಣ ಕ್ರಮಗಳ ಬಗ್ಗೆ ಹಾಗೂ ಎಸ್‌ಡಿಎಂಸಿ ಪ್ರಾಂಶುಪಾಲ ಡಾ. ಪ್ರಸನ್ನ ಎನ್. ರಾವ್ ಜನಾರೋಗ್ಯಕ್ಕಾಗಿ ಆಯುರ್ವೇದ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಗ್ರಾಮಸ್ಥರು ಹಾಗೂ ಶಿಬಿರಾರ್ಥಿಗಳಿಗೆ ದಿನನಿತ್ಯ ಬಳಕೆಯ ವಸ್ತುಗಳಿಂದ ಆರೋಗ್ಯ ಹೇಗೆ ಕಾಪಾಡಿಕೊಳ್ಳಬೇಕೆಂಬುದನ್ನು ಮನದಟ್ಟು ಮಾಡಿಕೊಡಲಾಯಿತು.

29ರಂದು ವಿದ್ಯಾರ್ಥಿಗಳಿಗೆ ಪುರಸ್ಕಾರ
ಹಾಸನ: ಒಕ್ಕಲಿಗರ ಸಂಘದಿಂದ ಸೆ.29 ಭಾನುವಾರ ಮಧ್ಯಾಹ್ನ 12ಕ್ಕೆ ಎಸ್ಸೆಸ್ಸೆಲ್ಸಿಯಲ್ಲಿ ಶೇ .80 ಹಾಗೂ  ದ್ವಿತೀಯ ಪಿಯುಸಿಯಲ್ಲಿ ಶೇ 70 ಕ್ಕಿಂತ ಹೆಚ್ಚು ಅಂಕಗಳಿಸಿರುವ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಏರ್ಪಡಿಸಲಾಗಿದೆ. ಆದಿ ಚುಂಚನಗಿರಿ ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು  ಪುರಸ್ಕರಿಸುವರು.
ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಚ್.ಪಿ.ಮೋಹನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಎಲ್.ಮುದ್ದೇಗೌಡ ಹಾಗೂ ಸರ್ಕಾರಿ ಪದವಿ ಪೂರ್ವ  ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಎನ್.ಪುಟ್ಟರಾಜು ಭಾಗವಹಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement