ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ಆರ್ಥಿಕಾಭಿವೃದ್ಧಿಯಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಉಪಯುಕ್ತ'

Srinivasa Murthy VN
Updated On : 28 Sept 2013, 10:42 am

ಸಕಲೇಶಪುರ: ಗ್ರಾಮೀಣ ಪ್ರದೇಶದಲ್ಲಿ ಹಿಂದುಳಿದ ಕುಟುಂಬಗಳನ್ನು ಆರ್ಥಿಕ, ಸಾಮಾಜಿಕವಾಗಿ ಅಭಿ ವೃದ್ಧಿಗೊಳಿಸುವ ನಿಟ್ಟಿನಲ್ಲಿ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆ  ಹೆಚ್ಚು ಉಪಯುಕ್ತವಾಗಿದೆ ಎಂದು ಬಿರಡಹಳ್ಳಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪ್ರಸಾದ್ ಹೇಳಿದರು.
 ತಾಲೂಕಿನ ಬಿರಡಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆಲಗಳಲೆ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಾಗೆ ವಲಯದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಮನೆ ಕೆಲಸಕ್ಕೆ ಮಾತ್ರ ಸೀಮಿತ ಆಗಿರುವ ಮಹಿಳೆಯರನ್ನು ಒಗ್ಗೂಡಿಸಿ, ಹಣ ಉಳಿತಾಯ, ಗುಡಿ ಕೈಗಾರಿಕೆಗಳನ್ನು ಮಾಡಲು ಗ್ರಾಮಾಭಿವೃದ್ಧಿ ಯೋಜನೆ ಮಾರ್ಗದರ್ಶನ ಹಾಗೂ ಆರ್ಥಿಕ ನೆರವು ನೀಡುತ್ತಿರುವುದು ಶ್ಲಾಘನೀಯ ಎಂದರು.
 ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾ ಅಧಿಕಾರಿ ಸುನಿತ ಪ್ರಭು ಮಾತನಾಡಿ, ಒಂದು ಕುಟುಂಬದ ದುಡಿಮೆಯ ಸ್ವಲ್ಪ ಪ್ರಮಾಣವನ್ನು ಸ್ವಸಹಾಯ ಸಂಘಗಳ ಮೂಲಕ ಉಳಿತಾಯ ಮಾಡುವುದು ಅಗತ್ಯವಾಗಿದೆ.
ಹಣಕಾಸಿನ ವ್ಯವಹಾರವನ್ನು  ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿ, ಕುಟುಂಬದ ಆದಾಯವನ್ನು ಹಂತ ಹಂತವಾಗಿ ಹೆಚ್ಚು  ಮಾಡುವುದೇ ತಮ್ಮ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಹಣ ಉಳಿತಾಯದ ಜೊತೆಗೆ ಮಕ್ಕಳಿಗೆ ಉತ್ತಮ ಶಿಕ್ಷಣ, ನೆಮ್ಮದಿಯ ಬದುಕು ರೂಪಿಸುವುದು ಮುಖ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳ, ಸದಸ್ಯರಾದ ಜಯಲಕ್ಷ್ಮಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಾಗೆ ವಲಯದ ಮೇಲ್ವಿಚಾರಕಿ ಎನ್.ಯಶೋಧ, ಸೇವಾ  ಪ್ರತಿನಿಧಿ ದೀಪಾ, ರಾಣಿ, ಬಿರಡಹಳ್ಳಿ ಮಾರಿಕಾಂಬ ದೇವಸ್ಥಾನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಜಯಗೌಡ ಇದ್ದರು.
ರಾಜಮ್ಮ ಪ್ರಾರ್ಥಿಸಿದರು, ಮೇಲ್ವಿಚಾರಕಿ ಎನ್.ಯಶೋಧ ಸ್ವಾಗತಿಸಿದರು. ಯೋಜನೆಯ ತಾಲೂಕು ಕೃಷಿ ಅಧಿಕಾರಿ ಜಗದೀಶ್ ನಿರೂಪಿಸಿದರು. ಸೇವಾ ಪ್ರತಿನಿಧಿ ದೀಪ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement