ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಕಡತ ಪರಿಶೀಲನೆ, ದಾಖಲೆ ಒದಗಿಸಲು ತಾಕೀತು

Vishwanath S
Updated On : 30 Sept 2013, 12:16 pm

ಕ.ಪ್ರ. ವಾರ್ತೆ, ಬೇಲೂರು, ಸೆ.29
ಲೋಕಾಯುಕ್ತ ಡಿವೈಎಸ್‌ಪಿ ಮತ್ತು ಸಿಬ್ಬಂದಿ ತಾಲೂಕು ಕಚೇರಿ ಖಜಾನೆ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ಶನಿವಾರ ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ನಡೆಸಿದರು.
ಲೋಕಾಯುಕ್ತ ಡಿವೈಎಸ್‌ಪಿ ಶಿವಬಸಪ್ಪ ಮಾತನಾಡಿ, ಸರ್ಕಾರಿ ಕಚೇರಿಗಳಲ್ಲಿ ದಾಖಲಾತಿ ನಿರ್ವಹಣೆ ಮಾಡುವಲ್ಲಿ ಹಿಂದೆ ಬಿದ್ದಿದ್ದು ಇದರಿಂದ ಸರ್ಕಾರದ ಸವಲತ್ತುಗಳು ಅರ್ಹ ಫಲಾನುಭವಿಗಳಿಗೆ ತಲುಪುವಲ್ಲಿ ವಿಫಲವಾಗಿದೆ ಅಸಮಧಾನ ವ್ಯಕ್ತಪಡಿಸಿದರು. ತಾಲೂಕು ಸಮಾಜ ಇಲಾಖೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಡಿವೈಎಸ್‌ಪಿ  ವಿದ್ಯಾರ್ಥಿ ವೇತನ ನೀಡುವಲ್ಲಿ ದಾಖಲೆ ನೀಡದೆ ಇರುವುದನ್ನು ಪರಿಶೀಲಿಸಿ, ಸೋಮವಾರ ಸಮರ್ಪಕ ದಾಖಲೆಯನ್ನು ಒದಗಿಸುವಂತೆ ತಾಕೀತು ಮಾಡಿದರು.  ಹಾಸ್ಟೆಲ್‌ಗಳಲ್ಲಿ ರಾತ್ರಿ ಸಮಯದಲ್ಲಿ ವಾರ್ಡನ್‌ಗಳು ವಿದ್ಯಾರ್ಥಿಗಳ ಯೋಗಕ್ಷೇವು ನೋಡದೆ ಇರುವುದರ ಬಗ್ಗೆ ದೂರು ಬಂದಿದ್ದು ಸಮಾಜ ಕಲ್ಯಾಣ ಅಧಿಕಾರಿ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಕ್ರಮ ತೆಗೆದು ಕೊಳ್ಳುವಂತೆ ಸೂಚನೆ ನೀಡಿದರು.
ಪಟ್ಟಣದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗಳಲ್ಲಿ ಮೂಲಸೌಲಭ್ಯ ಕಲ್ಪಿಸದೆ ಇರುವ ಬಗ್ಗೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ವಸತಿ ಶಾಲೆಗಳಲ್ಲಿ ಹಲವು ಕೋಣೆಗಳಿಗೆ ಬಾಗಿಲುಗಳಿಲ್ಲ. ಇಂಥ ಅವ್ಯವಸ್ಥೆಯಲ್ಲಿ ವಸತಿ ಶಾಲೆಗಳು ನಡೆಯುತ್ತಿದ್ದು ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿ, ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡದಂತೆ ತಾಕೀತು ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement