ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಕಾಂಗ್ರೆಸ್ ಗೆಲ್ಲಿಸಲು ಮನವಿ

Rashmi Kasaragodu
Updated On : 2 Apr 2014, 2:33 am

ಹೊಳೆನರಸೀಪುರ: ಕಾಂಗ್ರೆಸ್ ಅಭ್ಯರ್ಥಿ ಎ.ಮಂಜು ಅವರನ್ನು ಜಿಲ್ಲೆಯ ಎಲ್ಲ ಜಾತಿ ವರ್ಗಗಳ ಮತದಾರರು ಸ್ಪಂದಿಸಿ ಅವರನ್ನು ಗೆಲ್ಲಿಸುವಂತೆ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಟಿ.ಲಕ್ಷ್ಮಣ್ ಮನವಿ ಮಾಡಿದರು.
ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಹಿಂದ ವರ್ಗಗಳ ನಾಯಕ, ಮುಖ್ಯಮಂತ್ರಿ ಸಿದ್ದರಾಮಯ್ಯರಾಜ್ಯದ ಎಲ್ಲ ವರ್ಗಗಳ ಜನತೆಗೆ ನೀಡಿರುವ ಅನೇಕ ಜನಪ್ರಿಯ ಯೋಜನೆಗಳನ್ನು ಪ್ರಜ್ಞಾವಂತ ಮತದಾರರು ಮನಗಂಡು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಎ.ಮಂಜು ಅವರನ್ನು ಬೆಂಬಲಿಸಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.
ಕಾಂಗ್ರೆಸ್ ಅಸ್ತಿತ್ವಕ್ಕೆ ಬಂದಾಗಿನಿಂದಲೂ ದಲಿತ ಸಮುದಾಯಕ್ಕೆ ಅವಕಾಶ ನೀಡಿದೆ. ಈ ನಿಟ್ಟಿನಲ್ಲಿ ದಲಿತ ಸಮುದಾಯ ಎ.ಮಂಜು
ಅವರನ್ನು ಬೆಂಬಲಿಸುವಂತೆ ಕೋರಿದರು. ತಾಪಂ ಮಾಜಿ ಅಧ್ಯಕ್ಷ ಲಕ್ಕೂರು ಬಸವರಾಜ್, ಪುರಸಭೆ ಸದಸ್ಯೆ ಜಯಕಾಂತಮ್ಮ, ಇದ್ರೀಶ್ ಮತ್ತಿತರರು ಉಪಸ್ಥಿತರಿದ್ದರು.  



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement