ಇಂದು ಲೋಕಾಯುಕ್ತ ಎಸ್ಪಿ ಪ್ರವಾಸ
ಹಾಸನ: ಕರ್ನಾಟಕ ಲೋಕಾಯುಕ್ತ ಹಾಸನ ವಿಭಾಗದ ಪೊಲೀಸ್ ಅಧೀಕ್ಷಕ ಡಾ.ಸಿ.ಬಿ.ವೇದಮೂರ್ತಿ ಅವರ ಜಿಲ್ಲಾ ಪ್ರವಾಸ ಕಾರ್ಯಕ್ರಮದನ್ವಯ ಏ. 4ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2ರವರೆಗೆ ಸಕಲೇಶಪುರ ತಾಲ್ಲೂಕು ಕೇಂದ್ರದಲ್ಲಿ ಇರುವ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವರು. ಮಧ್ಯಾಹ್ನ 3ರಿಂದ 5.30ರವರೆಗೆ ಆಲೂರು ತಾಲ್ಲೂಕು ಕೇಂದ್ರದ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವರು. ಭೇಟಿ ಸಮಯದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದು ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.