ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ನಾಗರಿಕ ಸಮಾಜದ ಸೃಷ್ಟಿ ಎಲ್ಲರ ಕರ್ತವ್ಯ

Rashmi Kasaragodu
Updated On : 4 Apr 2014, 2:01 am

ಹಾಸನ: ನಾಗರಿಕ ಸಮಾಜದ ಸೃಷ್ಟಿ ಸಮಾಜದ ಪ್ರತಿಯೊಬ್ಬರ ಕರ್ತವ್ಯವಾಗಿದ್ದು ಈ ನಿಟ್ಟ ನಡೆಗೆ ಪ್ರತಿಯೊಬ್ಬರೂ ಪ್ರಯತ್ನಿಸಬೇಕೆಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ವಿ.ಜಿ.  ಬೋಪಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಎಂ. ಕೃಷ್ಣ ಕಾನೂನು ಕಾಲೇಜು ಮತ್ತು ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ, ಬೆಂಗಳೂರು ಇವರು ಜಂಟಿಯಾಗಿ ಆಯೋಜಿಸಿದ್ದ ಉದ್ಯೋಗದ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯ ತಡೆ ಮತ್ತು ಕಾನೂನು ಎಂಬ ವಿಷಯದ ಮೇಲೆ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ದೇಶಿಸಿ ಮಾತನಾಡುತ್ತಿದ್ದರು.
ಈ ನಿಟ್ಟಿನಲ್ಲಿ ಸಮಾಜದ ಇಂದು ಕೆಲಸದ ಸ್ಥಳದಲ್ಲಿ ನಡೆಯುತ್ತಿರುವ ಲೈಂಗಿಕ ದೌರ್ಜನ್ಯವನ್ನು ತಡೆಹಿಡಿಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಶಾಸನಗಳನ್ನು ಜಾರಿಗೆ ತಂದಿದ್ದು ಈ ಕುರಿತು ಕಾನೂನು ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು ಜಾಗೃತಿ ಮೂಡಿಸಬೇಕು ಎಂದರು.
ಅರಿವು ಮೂಡಿಸಬೇಕು: ಮುಖ್ಯ ಭಾಷಣ ಮಾಡಿದ ಕಾನೂನು ಸಂಸದೀಯ ಸಾಧಾರಣ ಸಂಸ್ಥೆ ಮುಖ್ಯಸ್ಥ ಕೆ.ಎಸ್. ಬಗಾಲೆ ಅವರು ಈ ರೀತಿಯ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ ಪ್ರತಿನಿಧಿಗಳು ತಾವು ಮಾತ್ರವೇ ಈ ವಿಷಯದ ಬಗ್ಗೆ ತಿಳಿದುಕೊಳ್ಳದೇ ಇತರರಿಗೂ   ಈ ಕಾನೂನಿನ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.
ಶಿಕ್ಷೆ ವಿಧಿಸಬೇಕು: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಂ. ಕೃಷ್ಣ ಕಾನೂನು ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷ ಎಚ್.ವಿ.ತಿಮ್ಮೇಗೌಡ ಅವರು ಲೈಂಗಿಕ ದೌರ್ಜನ್ಯ ಎನ್ನುವುದು ಕ್ಯಾನ್ಸರ್ನಂತೆ ಹರಡುತ್ತಿದ್ದು, ಒಂದು ವರ್ಷದ ಮಕ್ಕಳಿಂದ ಹಿಡಿದು ವಯಸ್ಸಾದ ಮುದುಕರ ಮೇಲೂ ಈ ದೌರ್ಜನ್ಯ ನಡೆಯುತ್ತಿದೆ ಎಂದರು.
ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಹತ್ತಿಕ್ಕಲು ಕಾನೂನು ರೀತ್ಯಾ ಶಿಕ್ಷೆಗಳನ್ನು ಕಠಿಣವಾಗಿ ವಿಧಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆ  ಗೌರವ ಕಾರ್ಯದರ್ಶಿ ಆರ್.ಟಿ. ದ್ಯಾವೇಗೌಡ, ಅವರು ಭಾಗವಹಿಸಿದ್ದರು. ಪ್ರಾಂಶುಪಾಲ ವೈ.ಪಿ. ಉದಯ್ ಕುಮಾರ್ ಸ್ವಾಗತಿಸಿದರು. ಸಹಾಯಕ  ಪ್ರಾಧ್ಯಾಪಕ ಚಂದ್ರಹಾಸ ವಂದಿಸಿದರು.
ಕು. ಮಾನಸ ಕಾರ್ಯಕ್ರಮ ನಿರೂಪಿಸಿದರು. ಕು.ಗೌರಿಬಾಯಿ ಮತ್ತು ಲಾವಣ್ಯ ಪ್ರಾರ್ಥನೆ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement