ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಆಯುಕ್ತರ ವಿರುದ್ಧ ಡಿಸಿಗೆ ಮನವಿ

Rashmi Kasaragodu
Updated On : 5 Apr 2014, 1:47 am

ಹಾಸನ: ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ನೀರಿನ ಸಮಸ್ಯೆ ಬಗೆಹರಿಸುವ ಕುರಿತು ಪೌರಾಯುಕ್ತರು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿ ನಗರಸಭೆ ಅಧ್ಯಕ್ಷೆ ಸೇರಿದಂತೆ ಸದಸ್ಯರು ಅಪರ ಜಿಲ್ಲಾಧಿಕಾರಿಗೆ ಮನವಿ ನೀಡಿದ್ದಾರೆ.
ನಗರಸಭೆ ಅಧ್ಯಕ್ಷ ಶ್ರೀವಿದ್ಯಾ ಆನಂದ್ ಹಾಗೂ ಸದಸ್ಯರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿ ಗೋಪಾಲಕೃಷ್ಣ ಅವರಿಗೆ ಮನವಿ ನೀಡಿದರು.
ಮಾರ್ಗದರ್ಶನ ನೀಡಿ: ಬೇಸಿಗೆಯಿಂದಾಗಿ, ನಗರದಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಆರಂಭವಾಗಿದೆ. ಪ್ರತಿನಿತ್ಯ ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ನಗರಸಭೆಗೆ ದೂರು ನೀಡುತ್ತಿದ್ದಾರೆ. ಹಾಗಾಗಿ ಸಮಸ್ಯೆಯನ್ನು ಬಗೆಹರಿಸಲು ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚೆ ನಡೆಸುವ ಸಂಬಂಧ ಸಭೆಗೆ ಬರುವಂತೆ ಆಯುಕ್ತರಿಗೆ ಹಲವು ಬಾರಿ ಸೂಚನೆ ನೀಡಲಾಗಿದೆ. ಆದರೆ, ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ, ಆಯುಕ್ತ ಕೃಷ್ಣಮೂರ್ತಿ ಸಭೆಗೆ ಹಾಜರಾಗುತ್ತಿಲ್ಲ. ಹಾಗಾಗಿ ಜಿಲ್ಲಾಧಿಕಾರಿಗಳು ಆಯುಕ್ತರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕೆಂದು ಒತ್ತಾಯಿಸಿದರು.
ನಗರಸಭಾ ಸದಸ್ಯರಾದ ಪ್ರೇಮ್ಕುಮಾರ್, ಅನಿಲ್ ಕುಮಾರ್, ವಿಜಯ ಕುಮಾರ್, ಮಹೇಶ್, ಶುಭ, ಅಂಬಿಕಾ ರವಿಶಂಕರ್, ಭಾನು ಪ್ರಕಾಶ್ ಹಾಗೂ ಇತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement