ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ನಿಟ್ಟೂರಿನಲ್ಲಿ ಮತ ಜಾಗೃತಿ ಜಾಥಾ

Rashmi Kasaragodu
Updated On : 5 Apr 2014, 1:46 am

ಹಾಸನ: ಜಿಲ್ಲಾ ಸ್ವೀಪ್ ಸಮಿತಿಯಿಂದ ಗುರುವಾರ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ  ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಜಾಥಾಕ್ಕೆ ತಾಲೂಕು ನೋಡಲ್ ಅಧಿಕಾರಿ ಹಾಗೂ ಸಹಾಯಕ ಯೋಜನಾಧಿಕಾರಿ ಟಿ. ಶಿವಣ್ಣ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಪ್ರತಿಯೊಬ್ಬ ಅರ್ಹರಿಗೂ ಚುನಾವಣಾ ಆಯೋಗ ಮತದಾನದ ಹಕ್ಕನ್ನು ನೀಡಿರುವುದರಿಂದ ಮತದಾರರು ತಮ್ಮ ಹಕ್ಕನ್ನು ಚಲಾಯಿಸುವುದರ ಮೂಲಕ ಮತದಾನದ ಮಹತ್ವದ ಬಗ್ಗೆ ಅರಿವು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಸ್ವೀಪ್ ಸಮಿತಿಯ ಸದಸ್ಯ ಕೃಷ್ಣಪ್ಪ ಮತದಾರರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಈ ಕಾರ್ಯಕ್ರಮದಲ್ಲಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಕೆ.ಎಸ್. ಪ್ರಕಾಶ್, ಕಾರ್ಯದರ್ಶಿ ಈರೇಗೌಡ, ಕೇಂದ್ರ ಕ್ಷೇತ್ರ ಪ್ರಚಾರ ನಿರ್ದೇಶನಾಲಯದ ಕ್ಷೇತ್ರ ಪ್ರಚಾರ ಸಹಾಯಕ ಪ್ರಕಾಶ್, ಸತೀಶ್ ಇತರರು ಇದ್ದರು.
ಜಾಥಾ ಕಾರ್ಯಕ್ರಮದಲ್ಲಿ ಗ್ರಾಮದ ನಾನಾ  ಸಂಘ- ಸಂಸ್ಥೆಗಳ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮದ ಜನರು ಭಾಗವಹಿಸಿದ್ದರು. ಜಾಥವು ಗ್ರಾಮದ ಪ್ರಮುಖ ಬೀದಿಗಳಲ್ಲಿ ಹೊರಟು ಮತದಾನದ ಅರಿವನ್ನು ಉಂಟುಮಾಡಲಾಯಿತು ಹಾಗೂ ಹೆಚ್ಚು ಹೆಚ್ಚು ಜನರು ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement