ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಜಿಲ್ಲಾಡಳಿತದಿಂದ ಜಗಜೀವನ್‌ರಾಂ ದಿನಾಚರಣೆ

Rashmi Kasaragodu
Updated On : 6 Apr 2014, 12:33 pm

ಹಾಸನ: ಲೋಕಸಭಾ ಚುನಾವಣೆಯ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾಡಳಿತದ ವತಿಯಿಂದ ಡಾ. ಬಾಬು ಜಗಜೀವನ್ ರಾಮ್ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಡಳಿತ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನ್ ರಾಮ್ ಅವರ ಜನ್ಮದಿನಾಚರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಗೌರವ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಜಗಜೀವನ್ ರಾಮ್ ಅವರು ಸಮಾದ ಅಭಿವೃದ್ಧಿ ಶ್ರಮಿಸಿದ್ದ ಮಹಾನ್ ನಾಯಕರು. ಅವರು ತಮ್ಮ ಕನಸು ನನಸು ಮಾಡುವಲ್ಲಿ ಸಮಾಜದ ಎಲ್ಲಾ ವರ್ಗದ ಜನರನ್ನು ಗಣನೆಗೆ ತೆಗೆದುಕೊಂಡು ಅವಕಾಶ ಕಲ್ಪಿಸಿದಂತಹ ವ್ಯಕ್ತಿ. ಹಿಂದುಳಿದ. ದೀನ-ದಲಿತರ ಏಳಿಗೆಗೆ ಶ್ರಮಿಸಿದಂತಹ ಮಹಾನ್ ವ್ಯಕ್ತಿ ಎಂದ ಬಣ್ಣಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್, ಸಮಾಜ ಕಲ್ಯಾಣಾಧಿಕಾರಿ ಪುರುಷತ್ತೋಮ್, ನಗರಸಭೆ ಆಯುಕ್ತ ಕೃಷ್ಣಮೂರ್ತಿ, ತಹಸೀಲ್ದಾರ್ ಮಂಜುನಾಥ್, ಎಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಶ್ಮಿ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ. ಶಿವಣ್ಣ, ಉಪ ವಿಭಾಗಾಧಿಕಾರಿ ಶರತ್ ಇತರರು ಇದ್ದರು. ನಂತರ ಬಂದ ಶಾಸಕ ಎಚ್.ಎಸ್. ಪ್ರಕಾಶ್, ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ, ಮಾಜಿ ಶಾಸಕ ಬಿ.ವಿ. ಕರೀಗೌಡ, ಲಕ್ಷ್ಮಣ್ ಹಾಗೂ ಇತರರು ಬಾಬು ಜಗಜೀವನ ರಾಮ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement