ತಾ.ಪಂ. ಅಧ್ಯಕ್ಷರ ಸ್ಥಾನ ತೆರವು
ಹಾಸನ: ಬೇಲೂರು ತಾಲೂಕು ಪಂಚಾಯ್ತಿ ಅಧ್ಯಕ್ಷರಾಗಿದ್ದ ಶಾಂತಮ್ಮ ಮಹದೇವಯ್ಯ ಅವರು ಅಧ್ಯಕ್ಷ ಸ್ಥಾನಕ್ಕೆ ಮಾ. 19ರಂದು ರಾಜೀನಾಮೆ ಸಲ್ಲಿಸಿದ್ದರು. ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆ 1993 ಪ್ರಕರಣ 140ರಂತೆ ನಿಗದಿತ ಅವಧಿಯಲ್ಲಿ ಇವರು ರಾಜೀನಾಮೆ ವಾಪಸ್ಸು ಪಡೆಯದ ಕಾರಣ ಇವರ ರಾಜಿನಾಮೆಯನ್ನು ಅಂಗೀಕರಿಸಿದೆ. ಇದರಿಂದಾಗಿ ತೆರವಾದ ಈ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಸಕಲೇಶಪುರ ಉಪವಿಭಾಗಾಧಿಕಾರಿಯವರಿಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.