ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಬಹುಮಾನಕ್ಕೆ ಜಾನಪದ ಕೃತಿಗಳ ಆಹ್ವಾನ

Rashmi Kasaragodu
Updated On : 6 Apr 2014, 12:28 pm

ಹಾಸನ: ಕರ್ನಾಟಕ ಜಾನಪದ ಅಕಾಡೆಮಿ 2013ರ ಜನವರಿ 1ರಿಂದ ಡಿಸೆಂಬರ್ 31 ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ಕನಿಷ್ಟ 150 ಪುಟಗಳ ಮಿತಿಯಲ್ಲಿರುವ, ಜಾನಪದ ಗದ್ಯ, ಪದ್ಯ, ವಿಚಾರ- ವಿಮರ್ಶೆ, ಸಂಶೋಧನೆ ಹಾಗೂ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ 2013ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಕೃತಿಗಳನ್ನು ಆಹ್ವಾನಿಸಿದೆ. ಲೇಖಕರು, ಪ್ರಕಾಶಕರು, ಸಂಪಾದಕರು ಕೃತಿಯ ನಾಲ್ಕು ಪ್ರತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಇವರಿಗೆ ಏ. 30ರೊಳಗೆ ತಲುಪುವಂತೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ 080-22215509 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement