ಬಿಜೆಪಿ ಎಸ್ಸಿ, ಎಸ್ಟಿ ಮೋರ್ಚಾ ಅಧ್ಯಕ್ಷರ ಅಸಮಾಧಾನ
ಬೇಲೂರು: ತಾಲೂಕು ಹಾಗೂ ಜಿಲ್ಲಾ ಬಿಜೆಪಿ ಮುಖಂಡರು ತಮ್ಮನ್ನು ಸಂಪೂರ್ಣ ಕಡೆಗಣಿಸುತ್ತಿದ್ದು ಪಕ್ಷದಲ್ಲಿ ನಡೆಯುವ ಯಾವುದೇ ಚಟುವಟಿಕೆಯನ್ನು ತಮ್ಮ ಗಮನಕ್ಕೆ ತರದೆ ಏಕಪಕ್ಷೀಯ ಧೋರಣೆಯ ಅನುಸರಿಸುತ್ತಿದ್ದಾರೆ ಎಂದು ತಾಲೂಕು ಪಂಚಾಯಿತಿ ಸದಸ್ಯ ಹಾಗೂ ತಾಲೂಕು ಬಿಜೆಪಿ ಎಸ್ಸಿ, ಎಸ್ಟಿ ಮೋರ್ಚಾ ಅಧ್ಯಕ್ಷ ಶೇಖರಯ್ಯ ದೂರಿದ್ದಾರೆ. ಜಿಲ್ಲಾ ಎಸ್ಸಿ ಎಸ್ಟಿ ಬಿಜೆಪಿ ಮೋರ್ಚಾ ಅಧ್ಯಕ್ಷ ಪರ್ವತಯ್ಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸುವ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ತಮ್ಮ ಅಸಮಾಧಾನ ತೋಡಿಕೊಂಡರು. ತಾಲೂಕಿನಲ್ಲಿ ಬಿಜೆಪಿ ಮುಖಂಡರನ್ನು ತುಳಿಯುವ ಯತ್ನದಲ್ಲಿ ಕೆಲವು ಮುಖಂಡರು ನಿರತರಾಗಿದ್ದಾರೆ ಎಂದು ಅವರು ಆರೋಪಿಸಿದರು.