'ರಕ್ತದಾನದಿಂದ ಹೃದಯಾಘಾತ, ಸಕ್ಕರೆ ಕಾಯಿಲೆ ಅವಕಾಶ ಕಡಿಮೆ'
ಸಕಲೇಶಪುರ: ನಿಯಮಿತ ರಕ್ತದಾನ ಮಾಡುವ ಮೂಲಕ ಹೃದಯಘಾತ, ರಕ್ತದೊತ್ತಡ, ಸಕ್ಕರೆ ಕಾಯಿಲೆಯಿಂದ ಪಾರಾಗಬಹುದು ಎಂದು ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಅನುಗನಾಳು ಕೃಷ್ಣಮೂರ್ತಿ ಹೇಳಿದ್ದಾರೆ. ಪಟ್ಟಣದ ಕುಡುಗರಹಳ್ಳಿಯ ಪ್ರಥಮದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ಎನ್ಎಸ್ಎಸ್, ರೆಡ್ರಿಬ್ಬನ್ ಹಾಗೂ ರೆಡ್ ಕ್ರಾಸ್ ಸಂಸ್ಥೆ ಆಶ್ರಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷ ಎಚ್.ಎಂ. ಶಿವಣ್ಣ, ಜಿಲ್ಲಾ ಆಸ್ಪತ್ರೆಯ ಹಿರಿಯ ತಂತ್ರಜ್ಞ ಶಿವಸ್ವಾಮಿ, ರೆಡ್ಕ್ರಾಸ್ ಸಂಸ್ಥೆ ತಾಲೂಕು ಅಧ್ಯಕ್ಷೆ ಶಾರದಾ ಗುರುಮೂರ್ತಿ, ಹರೀಶ್ ಆಚಾರಿ, ಸುರೇಶ್ ಇತರರು ಇದ್ದರು.