ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಸಾವಯವ ಕೃಷಿಗೆ ಆದ್ಯತೆ ನೀಡಲು ಕರೆ

Rashmi Kasaragodu
Updated On : 6 Apr 2014, 12:28 pm

ಆಲೂರು: ರೈತರು ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಕರ್ನಾಟಕ ಗಾಂಧಿ ಸ್ಮಾರಕ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಶಿವರಾಜ್ ಕರೆನೀಡಿದರು. ಅವರು ತಾಲೂಕಿನ ಭರತವಳ್ಳಿ ಪುಣ್ಯ ಭೂಮಿಯಲ್ಲಿ ಶುಕ್ರವಾರ ನಡೆದ ಪುಣ್ಯಭೂಮಿಯ ದಶಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಸಂಸ್ಥೆಯ ಗೌರವ ನಿರ್ದೇಶಕ ವಿಜಯ ಅಂಗಡಿ ಮಾತನಾಡಿ, ಇತ್ತಿಚಿನ ದಿನಗಳಲ್ಲಿ ಯುವಕರು ಕೃಷಿಯತ್ತ ಆಸಕ್ತಿ ತೋರುತ್ತಿರುವುದು ಉತ್ತಮ ಬೆಳವಣಿಗೆ ಎಂದರು. ಜೈವಿಕ ಕೃಷಿಯಲ್ಲಿ ಉತ್ತಮ ಸಾಧನೆ ಮಾಡಿರುವ ಹಲವಾರು ಪ್ರಗತಿ ಪರ ರೈತ ಗಿಡ್ಡೇಗೌಡ, ಮಧುಸೂಧನ್, ನಂದೀಶ್, ಹೇಮಾ ಅನಂತ್ ಜೈವಿಕ ಕೃಷಿಯಲ್ಲಿನ ತಮ್ಮ ಅನುಭವಗಳನ್ನು ಹಂಚಿಕೊಂಡರು. ಜೈವಿಕ ಕೃಷಿ ಮಾಹಿತಿ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement