ಹೆಣ್ಣು ಚಿರತೆಗಳ ಅನುಮಾನಾಸ್ಪದ ಸಾವು
ಚನ್ನರಾಯಪಟ್ಟಣ: ತಾಲೂಕಿನ ನುಗ್ಗೇಹಳ್ಳಿ ಹೋಬಳಿ ಎಂ. ದಾಸಾಪುರ ಬಳಿಯಿರುವ ಸರ್ಕಾರಿ ಜಮೀನಿನಲ್ಲಿ ಎರಡು ಹೆಣ್ಣು ಚಿರತೆಗಳು ಅನುಮಾನಸ್ಪದವಾಗಿ ಮರಣ ಹೊಂದಿರುವ ಘಟನೆ ನಡೆದಿದೆ.
ಎಂ. ದಾಸಾಪುರ ಸುತ್ತಮುತ್ತ ಚಿರತೆಗಳ ಹಾವಳಿ ಹೆಚ್ಚಾಗಿದ್ದ ಕಾರಣದಿಂದ ಕೆಲ ಕಿಡಿಗೇಡಿಗಳು ಆಹಾರದಲ್ಲಿ ವಿಷ ಬೆರಸಿ ಕೊಲೆ ಮಾಡಿದ್ದಾರೆಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಚನ್ನರಾಯಪಟ್ಟಣ ಅರಣ್ಯ ಇಲಾಖೆ ಅಧಿಕಾರಿಗಳು ಮರಣೋತ್ತರ ಪರಿಕ್ಷೆಯ ವರದಿ ನಂತರ ಸಂಪೂರ್ಣ ಮಾಹಿತಿ ತಿಳಿಯುತ್ತದೆ ನಂತರದಲ್ಲಿ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿ ಧರ್ಮಪ್ಪ ತಿಳಿಸಿದರು.