'ಕಾಂಗ್ರೆಸ್ನಿಂದ ಮಾತ್ರ ದೇಶದ ಏಕತೆ'
ಅರಕಲಗೂಡು: ದೇಶದಲ್ಲಿ ಸಮಗ್ರತೆ ಮತ್ತು ಐಕ್ಯತೆ ಕಾಪಾಡಲು ಕಾಂಗ್ರೆಸ್ನಿಂದ ಮಾತ್ರ ಸಾಧ್ಯ ಎಂದು ಎನ್ಎಸ್ಯುಐ ಜಿಲ್ಲಾ ಉಪಾಧ್ಯಕ್ಷ ಜಬಿವುಲ್ಲಾ ಅಭಿಪ್ರಾಯಪಟ್ಟಿದ್ದಾರೆ.
ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎ.ಮಂಜು ಪರ ಮತ ಯಾಚಿಸಿದರು. ಕಾಂಗ್ರೆಸ್ ಸರ್ಕಾರದಿಂದ ಜನಪರ ಹಾಗೂ ಬಡವರ ಪರ ಯೋಜನೆಗಳು ಜಾರಿ ಗೊಂಡಿದ್ದು, ಅಭಿವೃದ್ಧಿ ಕಾರ್ಯಗಳನ್ನು ಜನತೆಗೆ ತಿಳಿಸುವ ಮೂಲಕ ಪ್ರಚಾರ ಕಾರ್ಯ ನಡೆಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವಂತೆ ಮನವಿ ಮಾಡಿದರು.