ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಮತದಾರರ ಜಾಗೃತಿಗಾಗಿ ಕ್ರಿಕೆಟ್

Srinivasa Murthy VN
Updated On : 9 Apr 2014, 12:56 pm
ಹಾಸನ: ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ವತಿಯಿಂದ ಯುವ ಮತದಾರರ ಪ್ರೋತ್ಸಾಹ ಹಾಗೂ ಜಾಗೃತಿಗಾಗಿ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಯುವತಿಯರ ಅಂತರ ಕಾಲೇಜು ಕ್ರಿಕೆಟ್ ಪಂದ್ಯಾವಳಿಯನ್ನು ಮಂಗಳವಾರ ನಡೆಸಲಾಯಿತು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಉಪೇಂದ್ರ ಪ್ರತಾಪ್ ಸಿಂಗ್, ಪಂದ್ಯಾವಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯುವ ಮತದಾರರು ಯಾವುದೇ ಅಂಜಿಕೆ ಇಲ್ಲದೆ ಸ್ವಯಂ ಪ್ರೇರಣೆಯಿಂದ ಮತಗಟ್ಟೆಗಳಿಗೆ ತೆರಳಿ ಮತ ಚಲಾಯಿಸಬೇಕೆಂದು ಕರೆ ನೀಡಿದರು.
ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಎ.ಎನ್. ಮುರಳೀಧರ್, ನಗರಸಭೆ ಆಯುಕ್ತ ಕೃಷ್ಣಮೂರ್ತಿ ತಹಸೀಲ್ದಾರ್ ಮಂಜುನಾಥ್, ಸ್ವೀಪ್ ಸಮಿತಿ ಜಿಲ್ಲಾ ನೋಡಲ್ ಅಧಿಕಾರಿ ಮತ್ತು ವಾರ್ತಾಧಿಕಾರಿ ವಿನೋದ್ ಚಂದ್ರ, ಹಾಸನ ಕ್ರಿಕೆಟ್ ಅಸೋಸಿಯೇಷನ್‌ನ ಸುರೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ರವಿಕುಮಾರ್, ಜಿಲ್ಲಾ ಸ್ವೀಪ್ ಸಮಿತಿ ತಾಲ್ಲೂಕು ನೋಡಲ್ ಅಧಿಕಾರಿ ಶಿವಣ್ಣ, ಎನ್‌ಎಸ್‌ಎಸ್ ಅಧಿಕಾರಿ ಸರ್ಕಾರಿ ವಿಜ್ಞಾನ ಕಾಲೇಜಿನ ಕೃಷ್ಣಪ್ಪ, ಸರ್ಕಾರಿ ವೈದ್ಯಕೀಯ ಕಾಲೇಜಿನ ವಿಜಯ ಕುಮಾರ್, ಗೃಹ ವಿಜ್ಞಾನ ಕಾಲೇಜಿನ  ಮನೋಜಜ್ಕುಮಾರ್ ಕೃಷಿ ವಿಜ್ಞಾನ ಕಾಲೇಜಿನ ಉಮಾ ಶಂಕರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ, ಏ. 17ರಂದು ತಪ್ಪದೇ ಮತದಾನ ಮಾಡುವ ಪ್ರತಿಜ್ಞೆ ಸ್ವೀಕರಿಸಿದರು. 

Advertisement

Advertisement

ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೃಷ್ಣ ಕಾಲೇಜು, ಸರ್ಕಾರಿ ವಿಜ್ಞಾನ ಕಾಲೇಜು, ವೈದ್ಯಕೀಯ ಕಾಲೇಜು, ಗೃಹ ವಿಜ್ಞಾನ ಕಾಲೇಜು, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು ಸೇರಿದಂತೆ ನಾನಾ ಕಾಲೇಜುಗಳ ವಿದ್ಯಾರ್ಥಿನಿಯರ ತಂಡಗಳು ಪಾಲ್ಗೊಂಡಿದ್ದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement