ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ನಾಳೆ ಅಂಬೇಡ್ಕರ್ ದಿನಾಚರಣೆ

Srinivasa Murthy VN
Updated On : 13 Apr 2014, 12:16 pm

ಹಾಸನ: ಡಾ.ಬಿ.ಆರ್.ಅಂಬೇಡ್ಕರ್ ಅವರ 123ನೇ ಜಯಂತಿ ಪ್ರಯುಕ್ತ ಏಪ್ರಿಲ್ 14ರಂದು ಬೆಳಗ್ಗೆ 10ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿ, ಅಂಬೇಡ್ಕರ್ ಭವನ, ಹಾಸನ ಇಲ್ಲಿ ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವಪೂರ್ವಕವಾಗಿ ಜನ್ಮ ದಿನಾಚರಣೆ ಆಚರಿಸಲಾಗುವುದು. ಡಾ. ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸಮಾಜಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ.

ಗಣಿತ, ನಿಯಮಗಳಿಂದ ನೈಜ ಫಲಿತಾಂಶ
ಹೊಳೆನರಸೀಪುರ:  ಅರ್ಥಶಾಸ್ತ್ರದಲ್ಲಿ ಗಣಿತೀಯ ಮತ್ತು ಸಂಖ್ಯಾಶಾಸ್ತ್ರದ ನಿಯಮಗಳನ್ನು ಅಳವಡಿಸಿಕೊಂಡು ಅಧ್ಯಯನ ಮಾಡುವುದರಿಂದ ನೈಜ ಫಲಿತಾಂಶ ಪಡೆಯಬಹುದು ಎಂದು ಹಾಸನದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ. ಕೆ.ಡಿ. ಮುರುಳೀಧರ್ ತಿಳಿಸಿದರು.
ತಾಲೂಕಿನ ಪಡುವಲಹಿಪ್ಪೆಯ ಎಚ್.ಡಿ. ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ಇತ್ತೀಚೆಗೆ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್ಥಿಕ ನಿಯಮಗಳನ್ನು ವಿಶ್ಲೇಷಿಸುವಾಗ ಬಳಸಿಕೊಳ್ಳುವ ಅಂಕಿ ಅಂಶಗಳು ವಾಸ್ತವಿಕ ಹಿನ್ನೆಲೆಯಲ್ಲಿರಬೇಕು. ಆಗ ಮಾತ್ರ ನಿಖರವಾದ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ ಎಂದರು. ಬೇಡಿಕೆ, ಉತ್ಪಾದನೆ, ಉದ್ಯೋಗ, ಆದಾಯ, ಆರ್ಥಿಕ ಏರಿಳಿತ, ಬೆಲೆ ಸೂಚ್ಯಂಕ ಇವುಗಳ ನಿಖರವಾದ ಮಾಹಿತಿಯನ್ನು ಗಣಿತೀಯ ತಂತ್ರಗಳ ಮೂಲಕ ವಿಶ್ಲೇಷಿಸಲು ಅರ್ಥಶಾಸ್ತ್ರ ಸಹಕಾರಿಯಾಗಿದೆ ಎಂದು ವಿವರಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಡಿ. ನಾರಾಯಣ ಮಾತನಾಡಿ, ಅರ್ಥಶಾಸ್ತ್ರದಲ್ಲಿ ಗಣಿತಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರದ ಅನ್ವಯತೆ ಪ್ರಸ್ತುತವಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement