ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಅಂಬೇಡ್ಕರ್ ಕನಸು ನನಸಾಗಲಿ

Srinivasa Murthy VN
Updated On : 15 Apr 2014, 12:36 pm

ಸಂವಿಧಾನ ಶಿಲ್ಪಿ ಜನ್ಮದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಆಶಯ
ಹಾಸನ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ರ 123ನೇ ಜಯಂತಿಯನ್ನು ಸೋಮವಾರ ಜಿಲ್ಲಾಡಳಿತದ ವತಿಯಿಂದ ಶ್ರದ್ಧೆಯಿಂದ ಆಚರಿಸಲಾಯಿತು.
ನಗರದ ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ 123ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ ಅವರು, ಅಂಬೇಡ್ಕರ್ ಅವರು ಕಂಡ ಸಂವಿಧಾನದ ಕನಸ್ಸನ್ನು ನನಸ್ಸಾಗಿ ಮಾಡುವ ನಿಟ್ಟಿನಲ್ಲಿ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕು ಎಂದು ಕರೆ ನೀಡಿದರು.
ಬಹುದೊಡ್ಡ ರಾಷ್ಟ್ರಕ್ಕೆ ಉತ್ತಮ ಸಂವಿಧಾನ ಕೊಟ್ಟ ಅಂಬೇಡ್ಕರ್ ಅವರ ನೀತಿಯನ್ನು ಉಳಿಸಿಕೊಳ್ಳಬೇಕಾಗಿದೆ. ಇಂತಹ ಸಂವಿಧಾನ ನೀಡುವಲ್ಲಿ ಅಂಬೇಡ್ಕರ್ ಶ್ರಮಪಟ್ಟಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ಕಷ್ಟದಿಂದ ಬಂದು ವಿದ್ಯಾಭ್ಯಾಸ ಪಡೆದರು. ದೇಶದ ಅಭಿವೃದ್ಧಿಗಾಗಿ ಹೋರಾಟ ನಡೆಸಿದಂತಹ ಧೀಮಂತ ವ್ಯಕ್ತಿ ಎಂದು ಬಣ್ಣಿಸಿದರು.
ಶಿಕ್ಷಣದ ಅಗತ್ಯ: ಡಾ.ಬಿ.ಆರ್. ಅಂಬೇಡ್ಕರ್ ಕಂಡ ದೇಶದ ಅಭಿವೃದ್ಧಿಯ ಕನಸು ನನಸು ಮಾಡುವಲ್ಲಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯುವ ಅಗತ್ಯವಿದೆ ಎಂದು ಹೇಳಿದರು. ಲೋಕಸಭಾ ಚುನಾವಣೆ ಇರುವುದರಿಂದ ನೀತಿ ಸಂಹಿತೆ ಉಲ್ಲಂಘನೆ ಮಾಡಬಾರದೆಂದು ಸರಳವಾಗಿ ಜಯಂತಿ ಆಚರಣೆ ಮಾಡಲಾಯಿತು. ಮೊದಲು ಅಧಿಕಾರಿಗಳು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿದ ನಂತರ ರಾಜಕೀಯ ಮುಖಂಡರು ಬಂದ ಸನ್ನಿವೇಶ ಎದುರಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅನ್ಬುಕುಮಾರ್, ರವಿ ಡಿ. ಚನ್ನಣ್ಣನವರ್, ಜಿಪಂ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್,  ಅಪಾರ ಜಿಲ್ಲಾಧಿಕಾರಿ ಗೋಪಾಲಕೃಷ್ಣ, ತಹಸೀಲ್ದಾರ್ ಮಂಜುನಾಥ್, ಸಮಾಜ ಕಲ್ಯಾಣಾಧಿಕಾರಿ ಪುರುಷೋತ್ತಮ್, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ. ಶಿವಣ್ಣ ಹಾಗೂ ಕ್ಷೇತ್ರದ ಶಾಸಕ ಎಚ್.ಎಸ್. ಪ್ರಕಾಶ್, ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ಹಾಗೂ ಇತರರು ಇದ್ದರು.

ಬಹುದೊಡ್ಡ ರಾಷ್ಟ್ರಕ್ಕೆ ಉತ್ತಮ ಸಂವಿಧಾನ ಕೊಟ್ಟ ಅಂಬೇಡ್ಕರ್ ಅವರ ನೀತಿಯನ್ನು ಉಳಿಸಿಕೊಳ್ಳಬೇಕಾಗಿದೆ. ಇಂತಹ ಸಂವಿಧಾನ ನೀಡುವಲ್ಲಿ ಅಂಬೇಡ್ಕರ್ ಶ್ರಮಪಟ್ಟಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ಕಷ್ಟದಿಂದ ಬಂದು ವಿದ್ಯಾಭ್ಯಾಸ ಪಡೆದರು. ದೇಶದ ಅಭಿವೃದ್ಧಿಗಾಗಿ ಹೋರಾಟ ನಡೆಸಿದಂತಹ ಧೀಮಂತ ವ್ಯಕ್ತಿ
-ವಿ. ಅನ್ಬುಕುಮಾರ್,ಡಿಸಿ

ಭೀಮ್‌ಜಿ ಹೋರಾಟ ಅವಿಸ್ಮರಣೀಯ
ತಹಸೀಲ್ದಾರ್ ನಟರಾಜ್ ಅಭಿಮತ
ಅರಸೀಕೆರೆ: ಸಮಾಜದ ಹಿಂದುಳಿದ ಎಲ್ಲಾ ವರ್ಗಗಳಿಗೂ ಸಾಮಾಜಿಕ ನ್ಯಾಯವನ್ನು  ದೊರಕಿಸುವಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ನಡೆಸಿದ ಅನೇಕ  ಹೋರಾಟಗಳು ಅತ್ಯಂತ ಅವಿಸ್ಮರಣೀಯ ಎಂದು ತಾಲೂಕು ತಹಸೀಲ್ದಾರ್ ನಟರಾಜ್ ತಿಳಿಸಿದರು.
ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸೋಮವಾರ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್‌ರವರ 123ನೇ ಜನ್ಮ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮ ಆರಂಭಕ್ಕೂ ಮುನ್ನ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ರ್ಪಾರ್ಚನೆ ಸಲ್ಲಿಸಿದ ಅವರು, ಸರ್ವರಿಗೂ ಸಮ ಬಾಳು ಸರ್ವರಿಗೂ ಸಮಪಾಲು ಎಂಬ ಸಂದೇಶವನ್ನು ಸಮಾಜಕ್ಕೆ ಸಾರಿದ ಮಹಾನ್ ಮಾನವತಾವಾದಿ ಬಸವಣ್ಣ ಹಾಗೂ ಮಹಾತ್ಮ ಗಾಂಧೀಜಿ ಅವರ ಸಾಲಿನಲ್ಲಿ ಅಂಬೇಡ್ಕರ್ ನಿಲ್ಲುತ್ತಾರೆ ಎಂದರು.
ತತ್ವಾದರ್ಶ ಅಳವಡಿಸಿಕೊಳ್ಳಬೇಕು: ಅಂಬೇಡ್ಕರ್ ಅವರು, ತಮ್ಮ ವೈಯುಕ್ತಿಕ ಜೀವನದಲ್ಲಿ ಅನೇಕ ಸಂಕಷ್ಟಗಳನ್ನು ಅನುಭವಿಸಿ ಮೇಲೆ ಬಂದವರು ಎಂದ ನಟರಾಜ್, ಕಷ್ಟದ ಮಾರ್ಗದಲ್ಲಿ ಬಂದವರಾದ್ದರಿಂದ ಸಮಾಜದ ಎಲ್ಲಾ ಜಾತಿ ವರ್ಗಗಳಿಗೆ ಸಾಮಾಜಿಕ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಅಂಬೇಡ್ಕರ್ ತಮ್ಮ ಅವಿತರ ಹೋರಾಟಗಳ ಮೂಲಕ  ಸಾಮಾಜಿಕ ಕ್ರಾಂತಿಯನ್ನು ಹುಟ್ಟು ಹಾಕಿದರು. ಅಂತಹ ಮಹಾನ್ ವ್ಯಕ್ತಿಯ ಆದರ್ಶ, ಸದ್ಗುಣಗಳು ಮತ್ತು ಧೇಯ್ಯೋದ್ದೇಶಗಳನ್ನು ರಾಷ್ಟ್ರದ ಪ್ರತಿಯೊಬ್ಬ ಪ್ರಜೆಗಳು ತಮ್ಮ ಜೀವನದಲ್ಲಿ ಆಳವಡಿಸಿಕೊಳ್ಳಬೇಕೆಂದು ಹೇಳಿದರು.
ಮೌಲ್ಯ ಬೆಳೆಸಬೇಕು: ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಹಾಗೂ ಸಹಾಯಕ ಚುನಾವಣಾ ಅಧಿಕಾರಿ ಶಕೀಲ್ ಅಹಮದ್ ಮಾತನಾಡಿ, ಮಹಾನ್ ವ್ಯಕ್ತಿಗಳ ಹುಟ್ಟು ಹಬ್ಬಗಳನ್ನು ಆಚರಿಸುವ ಮೂಲಕ ಅಂತಹ ವ್ಯಕ್ತಿಗಳ ಜೀವನದ ಆದರ್ಶಗಳ ಮೌಲ್ಯಗಳನ್ನು ನಮ್ಮಲ್ಲಿ ಬೆಳೆಸಿಕೊಳ್ಳಬೇಕೆಂದು ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪ್ರಕಾಶ್ ಮೂರ್ತಿ ಎಲ್ಲರನ್ನೂ ಸ್ವಾಗತಿಸಿ ವಂದಿಸಿದರು.
ಕಾರ್ಯಕ್ರಮದಲ್ಲಿ ತಾಪಂ ಇಓ ಟಿ.ಎನ್. ಮೂರ್ತಿ, ಜಿಪಂ ಎಂಜೀನೀಯರಿಂಗ್ ಉಪ ವಿಭಾಗದ ಸಹಾಯಕ ಅಭಿಯಂತರ ಎನ್.ಎಂ. ಶೇಖರಪ್ಪ, ಪುರಸಭಾ ಮುಖ್ಯಾಧಿಕಾರಿ ಸತ್ಯನಾರಾಯಣ, ಸೇರಿದಂತೆ ನಾನಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ತಾಲೂಕಿನ ನಾನಾ ದಲಿತ ಸಂಘಟನೆಗಳ ಮುಖಂಡರಾದ ರಂಗನಾಥ್, ಮಾಡಾಳು ಮೂಡ್ಲಯ್ಯ, ಗೋವಿಂದರಾಜು, ಚಂದ್ರಯ್ಯ ಚಿಕ್ಕಬಾಣಾವರ ವೆಂಕಟೇಶ್ ಹಾಗೂ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement