ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ತಾಲೂಕು ಯುವ ಕಾಂಗ್ರೆಸ್ ಬೈಕ್ ರ್ಯಾಲಿ, ಮತಯಾಚನೆ

Srinivasa Murthy VN
Updated On : 15 Apr 2014, 12:41 pm

ಚನ್ನರಾಯಪಟ್ಟಣ: ತಾಲೂಕು ಯುವ ಕಾಂಗ್ರೆಸ್ ವತಿಯಿಂದ ಪಟ್ಟಣದಲ್ಲಿ ಬೈಕ್‌ರ್ಯಾಲಿ ನಡೆಸುವ ಮುಖೇನ ಕಾಂಗ್ರೆಸ್ ಪಕ್ಷಕ್ಕೆ ಮತ ಯಾಚಿಸಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಂಥರ್‌ಗೌಡ ನೇತೃತ್ವದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಬೈಕ್‌ಗಳಲ್ಲಿ ಎಪಿಎಂಸಿ ಯಾರ್ಡ್‌ನಿಂದ ಹೊರಟು, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಕಾಂಗ್ರೆಸ್‌ಗೆ ಮತ ಯಾಚಿಸಿದರು.
ಬೈಕ್ ರ್ಯಾಲಿಗೆ ಚಾಲನೆ ನೀಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಂಥರ್‌ಗೌಡ ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಲೆಯೆದ್ದಿದ್ದು, ಪಕ್ಷದ ಗೆಲುವು ಖಚಿತವಾಗಿದೆ. ಯುವಕರು ಪಕ್ಷ ಕಟ್ಟಿ ಬೆಳಸುವಲ್ಲಿ ಮುಂದಾಗಬೇಕು ಎಂದು ತಿಳಿಸಿದರು. ತಾನು ಚುನಾವಣೆಯಲ್ಲಿ ಸ್ಪರ್ಧಿಸುವ ಚಿಂತನೆ ನಡೆಸಿಲ್ಲ. ವಿರೋಧಿಗಳ ಏನಾದರೂ ಮಾತನಾಡಲಿ, ತಾವು ಪಕ್ಷ ಕಟ್ಟಿ ಬೆಳಸುವುದೊಂದೆ ತಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ ಯಾವ ಆರೋಪಕ್ಕೂ ಉತ್ತರಿಸುವುದಿಲ್ಲ ಎಂದು ತಿಳಿಸಿದರು.  
ಮ್ಜಾಜಿ  ಶಾಸಕ ಸಿ.ಎಸ್. ಪುಟ್ಟೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಾಲಸ್ವಾಮಿ, ಎಚ್.ಎಸ್. ವಿಜಯ್‌ಕುಮಾರ್, ರಾಜಪ್ಪ, ರಂಗೇಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಬಾಬು ಹಾಗೂ ಇತರೆ ನಾಯಕರು ನೇತೃತ್ವ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement