ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ತೃತೀಯ ರಂಗ ಕೇವಲ ಕನಸು'

Srinivasa Murthy VN
Updated On : 16 Apr 2014, 1:11 am

ಕನ್ನಡಪ್ರಭ ವಾರ್ತೆ, ಹಾಸನ, ಏ. 15
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತೃತೀಯ ರಂಗದ ಕನಸು ಕಾಣುತ್ತಿದ್ದು, ದೇಶದಲ್ಲಿ ಈ ಬಾರಿ ಸ್ಥಿರ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಕಂದಾಯ ಸಚಿವ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಲಾಯಂ ಸಿಂಗ್ ಯಾದವ್, ದೇವೇಗೌಡರು ಮತ್ತು ನಿತೀಶ್ ಕುಮಾರ್ ಸೇರಿದಂತೆ ಇತರೆ ಪಕ್ಷಗಳ ಮುಖಂಡರೊಂದಿಗೆ ಚರ್ಚೆ ನಡೆದಿದೆಯಷ್ಟೇ. ಆದರೆ ತೃತೀಯ ರಂಗ ರಚನೆಯಾಗಿಲ್ಲ. ದೇಶವನ್ನು ಮುನ್ನಡೆಸುವಂಥದು ಕಾಂಗ್ರೆಸ್ ಸರ್ಕಾರ. ಅದು ಫಲಿತಾಂಶ ಬಂದ ನಂತರ ಎಲ್ಲರಿಗೂ ಅರಿವಾಗಲಿದೆ ಎಂದರು.
20 ಸೀಟು: ದೇಶದ ಅಭಿವೃದ್ಧಿಗೆ ಸ್ಥಿರ ಸರ್ಕಾರ ರಚನೆಯ ಅವಶ್ಯಕತೆ ಇದ್ದು, ದೇಶದಲ್ಲಿ ಈವರೆಗೆ ನಡೆದ 15 ಲೋಕಸಭಾ ಚುನಾವಣೆಗಳ ಪೈಕಿ 7 ಬಾರಿ ಕಾಂಗ್ರೆಸ್ ಸ್ಥಿರ ಸರ್ಕಾರ ರಚನೆ ಮಾಡಿದೆ. ರಾಜ್ಯದ ಒಟ್ಟು 28 ಕ್ಷೇತ್ರಗಳ ಪೈಕಿ 20 ಕಡೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲವು ಸಾಧಿಸಲಿದ್ದು, ಇದರಲ್ಲಿ ಹಾಸನ ಕ್ಷೇತ್ರವೂ ಒಂದಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಸೋನಿಯಾಗಾಂಧಿ ಅವರು ರಾಜ್ಯ ಪ್ರವಾಸಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಹಾಸನ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಕ್ಷೇತ್ರಗಳನ್ನು ಗೆಲ್ಲುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್ ಅಭ್ಯರ್ಥಿ ಎ. ಮಂಜು, ಮುಖಂಡ ನಾರಾಯಣಗೌಡ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement