ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ಹೆಚ್ಚು ಮತಗಟ್ಟೆಗಳಲ್ಲಿ ಜೆಡಿಎಸ್ ಗೆಲವು'

Srinivasa Murthy VN
Updated On : 18 Apr 2014, 11:40 am

ಅರಸೀಕೆರೆ: ಲೋಕಸಭಾ ಚುನಾವಣೆಯಲ್ಲಿ ಅರಸೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ 275 ಮತಗಟ್ಟೆಗಳ ಪೈಕಿ 200ಕ್ಕೂ ಹೆಚ್ಚಿನ ಮತಗಟ್ಟೆಗಳಲ್ಲಿ ಜೆಡಿಎಸ್ ಮೇಲುಗೈ ಸಾಧಿಸುವ ಮೂಲಕ ಮಾಜಿ ಪ್ರಧಾನಿಗಳಿಗೆ ಸುಮಾರು 30 ಸಾವಿರಕ್ಕೂ ಅಧಿಕ ಬಹುಮತ ದೊರೆಯಲಿದೆ ಎಂಬ ವಿಶ್ವಾಸವನ್ನು ಶಾಸಕ ಕೆ.ಎಂ. ಶಿವಲಿಂಗೇಗೌಡ ಶುಕ್ರವಾರ ವ್ಯಕ್ತಪಡಿಸಿದರು.
ಪಟ್ಟಣದ ಮಾರುತಿ ನಗರದ ಶಾಸಕರ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಅವರು, ಎಲ್ಲಾ ಮತದಾರರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಅತ್ಯಂತ ಹೆಚ್ಚಿನ ಬಹುಮತ ನೀಡುವ ಮೂಲಕ ನೂತನ ದಾಖಲೆ ಬರೆಯಲಿದ್ದಾರೆ ಎಂದರು.
ಅಭಿನಂದನೆ: ಪಟ್ಟಣದ ವ್ಯಾಪ್ತಿಯಲ್ಲಿ 5 ಸಾವಿರ, ಕಸಬಾ ಹೋಬಳಿ 7 ಸಾವಿರ, ಬಾಣಾವರ ಹೋಬಳಿ, 7 ಸಾವಿರ, ಕಣಕಟ್ಟೆ ಹೋಬಳಿ 6 ಸಾವಿರ, ಗಂಡಸಿ ಹೋಬಳಿ 6 ಸಾವಿರ ಮತಗಳು ಸೇರಿದಂತೆ 30 ಸಾವಿರಕ್ಕೂ ಅಧಿಕ ಮತಗಳು ಜೆಡಿಸ್‌ಗೆ ದೊರೆಯಲಿದೆ. ಆದ್ದರಿಂದ, ಈ ಚುನಾವಣೆಯಲ್ಲಿ ಹಗಲು ರಾತ್ರಿ ಎನ್ನದೇ ಕೆಲಸ ಮಾಡಿದ ಎಲ್ಲಾ ಮುಖಂಡರಿಗೂ ಮತ್ತು ಕಾರ್ಯಕರ್ತರಿಗೆ ಹಾಗೂ ಅಭಿಮಾನಿಗಳಿಗೂ ತಾವುಗಳು ಹೃತ್ಪೂರ್ವಕವಾಗಿ ಅಭಿನಂದಿಸುವುದಾಗಿ ಹೇಳಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಜೆಪಿಯನ್ನು ಬೆಂಬಲಿಸಿದ್ದ ಮತದಾರರ ಪೈಕಿ ಶೇ. 50ರಷ್ಟು ಮಂದಿ ಈ ಚುನಾವಣೆಯಲ್ಲಿ ಜೆಡಿಎಸ್ ಪರವಾಗಿ ಮತ ಚಲಾಯಿಸಿದ್ದಾರೆ. ಶೇ. 30ರಷ್ಟು ಮಂದಿ ಕಾಂಗ್ರೆಸ್ ಹಾಗೂ ಶೇ. 20ರಷ್ಟು ಮಂದಿ ಬಿಜೆಪಿಯನ್ನು ಬೆಂಬಲಿಸಿ ಮತದಾನ ಮಾಡಿರುವ ಸಾಧ್ಯತೆಗಳಿದ್ದು, ಮಾಜಿ ಪ್ರಧಾನಿ ಲೋಕಸಭೆ ಪ್ರವೇಶಿಸುವ ಅವಕಾಶ ಹೆಚ್ಚಾಗಿದೆ ಎಂದು ಶಿವಲಿಂಗೇಗೌಡ ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಎನ್.ಎಸ್. ಸಿದ್ದರಾಮಶೆಟ್ಟಿ ಹಾಗೂ ಕ್ಷೇತ್ರದ ನಾನಾ ಗ್ರಾಮಗಳ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement