ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಅಧ್ಯಕ್ಷರ ಟೀಕೆಗೆ ಖಂಡನೆ

Mainashree
Updated On : 23 Apr 2014, 9:49 am

ಅರಸೀಕೆರೆ: ಕಾಂಗ್ರೆಸ್ ಪಕ್ಷದ ಸದಸ್ಯತ್ವವನ್ನೇ ಪಡೆಯದ ಉದ್ಯಮಿ ಜೆ.ಪಿ. ಜಯಣ್ಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡುತ್ತಿರುವುದು ಖಂಡನೀಯ ಎಂದು ಕೆ.ಪಿ.ಸಿ.ಸಿ ಸದಸ್ಯ ಹಾಗೂ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಪಟೇಲ್ ಶಿವಪ್ಪ ಕಿಡಿಕಾರಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಅರಸೀಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪಕ್ಷದ ಮುನ್ನಡೆ, ಸಾಧಕ ಬಾಧಕಗಳ ಕುರಿತಂತೆ  ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಮುಖಂಡ ಜಯಣ್ಣ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕೆಂದು. ಅಲ್ಲದೇ, ಬಹಿರಂಗ ಕ್ಷಮೆಯಾಚನೆ ಮಾಡಬೇಕೆಂದು ಒತ್ತಾಯಿಸಿದರು.
ಎಚ್ಚರಿಕೆ: ಆಂತರಿಕ ವಿದ್ಯಮಾನಗಳನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕೇ ಹೊರತು, ಮಾದ್ಯಮಗಳ ಮೂಲಕವಲ್ಲ. ಜೆ.ಪಿ. ಜಯಣ್ಣ ತಮ್ಮ ನಡವಳಿಕೆ ಸರಿಪಡಿಸಿಕೊಳ್ಳದಿದ್ದರೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಹೇಳಿಕೆ ಸರಿಯಲ್ಲ: ಕಳೆದ ವಿಧನಸಭಾ ಚುನಾವಣೆಯಲ್ಲಿ ಹಿನ್ನೆಡೆ ಸಾಧಿಸಿದ್ದ ಕಾಂಗ್ರೆಸ್ ಈ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ನಿಕಟ ಪೈಪೋಟಿ ನಡೆಸಿದೆ. ಮುಖಂಡರ ಸಹಕಾರದಕೊರತೆ, ಸಮರ್ಥ ನಾಯಕತ್ವ ಇಲ್ಲದ ವೇಳೆಯಲ್ಲಿ ಜಿಲ್ಲಾಧ್ಯಕ್ಷ ಬಿ. ಶಿವರಾಂ ತಳಮಟ್ಟದಿಂದ ಭದ್ರ ಬುನಾದಿ ಹಾಕಿ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಿ ಪಕ್ಷವನ್ನು ಬಲಗೊಳಿಸಿದ್ದಾರೆ. ಹೀಗಿರುವಾಗ, ಪಕ್ಷಕ್ಕೆ ಹಾನಿ ಆಗುವ ರೀತಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದರು.
ತಿರುಗೇಟು: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಜಿಗೆರೆ ಚಂದ್ರಶೇಖರ್ ಮಾತನಾಡಿ, ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಗಣನೀಯ ಪ್ರಮಾಣದ ಮತ ಪಡೆಯಲಿದ್ದು ವಿರೋಧ ಪಕ್ಷಗಳಿಗೆ ಕಾಂಗ್ರೆಸ್ ಸಾಮರ್ಥ್ಯ ಏನೆಂಬುದು ಫಲಿತಾಂಶದ ನಂತರ ತಿಳಿಯಲಿದೆ. ಮಾಜಿ ಸಚಿವ ಬಿ.ಶಿವರಾಂ ಟೀಕೆಗೆ ಮುಂದಾಗಿರುವ ಜಯಣ್ಣ ಮೊದಲು ಪಕ್ಷದ ಸದಸ್ಯತ್ವ ಪಡೆಯಲಿ. ಆ ನಂತರ ಮಾತನಾಡಲಿ ಎಂದು ತಿರುಗೇಟು ನೀಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮಂಜುರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ  ಬಿ.ಜಿ.ನಿರಂಜನ್, ತಾಲೂಕು ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಣ್ಣಾಯಕನಹಳ್ಳಿ ವಿಜಯಕುಮಾರ್, ಗಂಡಸಿಮುಂಜಣ್ಣ, ಆಶ್ರಯ ಸಮಿತಿ ಸದಸ್ಯ ಜಿ.ಟಿ.ಎಸ್. ಗೌಸ್ ಖಾನ್, ದುಮ್ಮೇನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಅಜಯ್, ಪುರಸಭಾ ಚುನಾಯಿತ, ನಾಮನಿರ್ದೇಶಿತ ಸದಸ್ಯರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement