ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಸುಧಾಕರ್

Mainashree
Updated On : 25 Apr 2014, 12:03 pm

ಚಿಕ್ಕಬಳ್ಳಾಪುರ: ಚುನಾವಣಾ ನೀತಿ ಸಂಹಿತೆ ಸಡಿಲಗೊಳ್ಳುತ್ತಿದ್ದಂತೆ ಶಾಸಕ ಡಾ. ಕೆ. ಸುಧಾಕರ್ ನಗರದ ವಿವಿಧೆಡೆ ಸಂಚರಿಸಿ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ನಗರದ ಸಿಎಸ್‌ಐ ಆಸ್ಪತ್ರೆ ಮುಂಭಾಗದಲ್ಲಿ ನಡೆಯುತ್ತಿರುವ ಚರಂಡಿ ಕಾಮಗಾರಿಯನ್ನು ವೀಕ್ಷಿಸಿದರು. ಕಳಪೆ ಕಾಮಗಾರಿ ಮಾಡಿರುವುದನ್ನು ಕಂಡ ಶಾಸಕರು ಅಧಿಕಾರಿಗಳ ಹಾಗೂ ಗುತ್ತಿಗೆದಾರರ ವಿರುದ್ಧ ಸಿಡಿಮಿಡಿ ಗೊಂಡರು.   
ರಸ್ತೆ ಮಟ್ಟಕ್ಕಿಂತ ಕೆಳಗೆ ಚರಂಡಿ ಇರಬೇಕು ಆದರೆ ರಸ್ತೆ ಮಟ್ಟಕ್ಕಿಂತ ಮೇಲೆ ಚರಂಡಿ ನಿರ್ಮಿಸಲಾಗಿದೆ. ಇದರಿಂದ ರಸ್ತೆಯಲ್ಲಿ ಬೀಳುವ ಮಳೆಯ ನೀರು ಚರಂಡಿಗೆ ಹೋಗುವುದಿಲ್ಲ. ಚರಂಡಿ ನಿರ್ಮಿಸುವಾಗ  ವೈಜ್ಞಾನಿಕವಾಗಿ ನಿರ್ಮಿಸಬೇಕು. ಈಗ ಮಾಡಲಾಗಿರುವ ಚರಂಡಿಯಲ್ಲಿ ಸಮರ್ಪಕವಾಗಿ ನೀರು ಹೋಗುವುದಿಲ್ಲ ಇದು ಅವೈಜ್ಞಾನಿಕವಾಗಿದೆ. ಚರಂಡಿಗೆ ಸರಿಯಾಗಿ ಸಿಮೆಂಟ್ ಹಾಕಿಲ್ಲ. ಚರಂಡಿ ನಿರ್ಮಿಸುವ ಮೊದಲು ಜೆಸಿಬಿಯಿಂದ ಕೆಲಸ ಮಾಡಿಸಬೇಕು. ಬೇರೆ ಕ್ಷೇತ್ರಗಳಲ್ಲಿ ಮಾಡಿದ ರೀತಿ ನನ್ನ ಕ್ಷೇತ್ರದಲ್ಲಿ ಮಾಡಬೇಡಿ.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಡಾ. ಕೆ. ಸುಧಾಕರ್, ನಾಗರೋತ್ಥನ-2 ಹಂತದ ಯೋಜನೆಯಲ್ಲಿ ಸಣ್ಣ ಮತ್ತು ಮಾಧ್ಯಮ ಪಟ್ಟಣಗಳ ಅಭಿವೃದ್ಧಿ ಯೋಜನೆಯಡಿಯಲ್ಲಿ 30 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ರಸ್ತೆ ಮತ್ತು ಒಳ ಚರಂಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಚರಂಡಿ ಕಾಮಗಾರಿಗಳ ಪರಿಶೀಲನೆ ನಡೆಸಲಾಗುತ್ತಿದೆ. ಜಿಲ್ಲಾ ಕೇಂದ್ರವನ್ನು ಒಂದು ಮಾದರಿ ನಗರವನ್ನಾಗಿಸುವ ಪ್ರಯತ್ನಕ್ಕೆ ಗುತ್ತಿಗೆದಾರರು, ಅಧಿಕಾರಿಗಳ ಸಹಕಾರ ಅಗತ್ಯ. ಜಿಲ್ಲಾ ಕೇಂದ್ರದ ಬಗ್ಗೆ ಸಾಕಷ್ಟು ಕನಸು ಕಂಡಿದ್ದೇವೆ. ನಗರವನ್ನು ಒಂದು ಮಾದರಿ ನಗರವನ್ನಾಗಿಸುವ ಸಂಕಲ್ಪ ತೊಟ್ಟಿದ್ದು, ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಈ ದಿಸೆಯಲ್ಲಿ 30 ಕೋಟಿ ವೆಚ್ಚದಲ್ಲಿ ನಗರದಾದ್ಯಂತ ಕೈಗೊಂಡಿರುವ ರಸ್ತೆ, ಚರಂಡಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಈಗಾಗಲೇ ಜಿಲ್ಲಾಡಳಿತ ಭವನ ತಲೆಯೆತ್ತಿ ಕಾರ್ಯ ನಿರ್ವಹಿಸುತ್ತಿದೆ. ಹೈಟೆಕ್ ಆಸ್ಪತ್ರೆ, ಬಸ್ ನಿಲ್ದಾಣಗಳ ಕಾಮಗಾರಿಗಳು ಬರದಿಂದ ಸಾಗುತ್ತಿದ್ದು, ಸದ್ಯದಲ್ಲೇ ಮೆಡಿಕಲ್ ಕಾಲೇಜು ಸಹಾ ಸ್ಥಾಪನೆಯಾಗಲಿದೆ. ಆದ್ದರಿಂದ ರಸ್ತೆಗಳು ಪ್ರಮುಖ ಪಾತ್ರ ವಹಿಸಲಿದ್ದು, ಗುಣಮಟ್ಟ ಹಾಗೂ ಸ್ವಚ್ಛತೆ ಹೆಚ್ಚು ಆದ್ಯತೆ ನೀಡಬೇಕು. ಈ ದಿಸೆಯಲ್ಲಿ ಗುತ್ತಿಗೆದಾರರು ಯಾವುದೇ ಕಾಮಗಾರಿಗಳ ಬಗ್ಗೆ ನಿರ್ಲಕ್ಷ್ಯ ತೋರದೆ, ಲೋಪದೋಷ ಕಾಣದಂತೆ ಕೆಲಸ ನಿರ್ವಹಿಸಬೇಕು. ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ನಗರಸಭೆ ಆಯುಕ್ತ ಮುನಿಶ್ಯಾಮಪ್ಪ, ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement