ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಸಾಂಪ್ರದಾಯಿಕ ಪರಂಪರೆ ಉಳಿಸಿ

Mainashree
Updated On : 24 Apr 2014, 11:43 am

ಹಾಸನ: ಹಿಂದಿನ ಸಾಂಪ್ರದಾಯಕ ಪರಂಪರೆಯನ್ನು ಯುವಕರು ಉಳಿಸಿ, ಬೆಳೆಸಬೇಕೆಂದು ಎನ್.ಡಿ.ಆರ್.ಕೆ. ಕಾಲೇಜಿನ ಪ್ರಾಂಶುಪಾಲ ಕೆ. ಶಾಮ್‌ಭಟ್ ಕರೆ ನೀಡಿದರು.
ನಗರದ ಎನ್.ಡಿ.ಆರ್.ಕೆ. ಕಾಲೇಜ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸಾಂಪ್ರದಾಯಿಕ ಆಚರಣೆ ಹಾಗೂ ಸುಗ್ಗಿ ಸಂಭ್ರಮ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಪರಂಪರೆ ಉಳಿಸಿ ಬೆಳೆಸಲು ಮುಂದಾಗಬೇಕು ಎಂದರು.
ಕಿವಿಮಾತು: ಹಿಂದೆ ಗ್ರಾಮೀಣ ಪ್ರದೇಶಗಳಲ್ಲಿ ಹಾಕಲಾಗುತ್ತಿದ್ದ ಅವರ ಉಡುಗೆ- ತೊಡುಗೆಗಳನ್ನು ಯುವಕರು ಈಗ ಮತ್ತೆ ತೊಡುತ್ತಿರುವುದು ಉತ್ತಮ ಬೆಳವಣಿಗೆ ಎಂದು ಸಂತೋಷ ವ್ಯಕ್ತಪಡಿಸಿದ ಅವರು, ಪದ್ಧತಿ ಹಾಗೂ ಆಚರಣೆಗಳಲ್ಲಿ ಗಟ್ಟಿತನ ಬೆಳೆಸಿಕೊಳ್ಳಬೇಕು.  ಪ್ರಸ್ತುತದಲ್ಲಿ ಹೊಸ ಹೊಸ ತಂತ್ರಜ್ಞಾನ ಬಂದರೂ ಈಗಿನ ಪೀಳಿಗೆಗೆ ಎಷ್ಟು ಬೇಕೋ ಅಷ್ಟನ್ನು ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳು ತಮ್ಮದೇ ಆದ ಉಡುಗೆ ಹಾಕಿಕೊಳ್ಳುವುದರ ಮೂಲಕ ಗ್ರಾಮೀಣ ಸೊಗಡಿನ ಸಂಭ್ರಮವನ್ನು ತಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಇತಿಹಾಸ ವಿಭಾಗದ ಜೈರಾಮ್, ಆಂಗ್ಲ ಮಾಧ್ಯಮ ವಿಭಾಗದ ಮನ್ವಾಚಾರ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement