ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಹಿಂದುಳಿದವರ ಅಭಿವೃದ್ಧಿಗೆ ಶ್ರಮಿಸಿದ ಕೃಷ್ಣಪ್ಪ

Mainashree
Updated On : 25 Apr 2014, 12:03 pm

ಅರಸೀಕೆರೆ: ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸಿದ ಮಹಾನ್ ಚೇತನ ಎ. ಕೃಷ್ಣಪ್ಪವರ ನಿಧನ ತುಂಬಲಾರದ ನಷ್ಟ ಎಂದು ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಬಿಳಿಚೌಡಯ್ಯ ಅಭಿಪ್ರಾಯಪಟ್ಟರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಎ. ಕೃಷ್ಣಪ್ಪ ನಿಧನದ ನಿಮಿತ್ತ  ಗುರುವಾರ ಏರ್ಪಡಿಸಲಾಗಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, 4 ಶಾಸಕರಾಗಿ ಒಮ್ಮೆ ಸಚಿವರಾಗಿ ಯಾದವ ಸಮಾಜವನ್ನು ಆರ್ಥಿಕವಾಗಿ ಸಾಮಾಜಿಕವಾಗಿ ಅಭಿವೃದ್ಧಿಪಡಿಸಲು ಶ್ರಮಿಸಿದ ಮಹಾನ್ ವ್ಯಕ್ತಿ ಎಂದರು.
ತುಂಬಲಾರದ ನಷ್ಟ: ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಸಮಾಜಕ್ಕೆ ಅದ್ಬುತ ಕೊಡುಗೆಗಳನ್ನು ನೀಡಿದ ಅವರು ಜೆ.ಡಿ.ಎಸ್. ರಾಜ್ಯಧ್ಯಕ್ಷರಾಗಿ ಪಕ್ಷವನ್ನು ರಾಜ್ಯದಲ್ಲಿ ಸದೃಢಗೊಳಿಸಲು ಹಗಲು ರಾತ್ರಿ ಎನ್ನದೆ ಹೋರಾಟ ನಡೆಸಿದರು. ಅವರ ನಿಧನದಿಂದ ಪಕ್ಷಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ ಎಂದರು.
ಅಗಲಿದ ಧೀಮಂತ: ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷ ಹಾಗೂ ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಪಟೇಲ್ ಶಿವಪ್ಪ ಮಾತನಾಡಿ, ದೇವರಾಜರಸು ನಂತರ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಒಬ್ಬ ಧೀಮಂತ ನಾಯಕ ಅವರ ಅಗಲಿಕೆಯಿಂದ ಮಹಾನ್ ವ್ಯಕ್ತಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದರು.
ಧೀಮಂತ ನಾಯಕ: ಎಸ್.ಎಂ. ಕೃಷ್ಣ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ, ಯಾದವ ಸಮಾಜದ ಅಭಿವೃದ್ಧಿಗಾಗಿ ಬೆಳ್ಳಿ ಬೆಳಕು ಯೋಜನೆಯನ್ನು ಜಾರಿಗೆ ತಂದು ಹಿಂದುಳಿದ ಎಲ್ಲಾ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿ ಯಾದವ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ದುಡಿದ ಧೀಮಂತ ನಾಯಕ ಎಂದರು.
ಮಾಜಿ ಶಾಸಕ ಜಿ.ಎಚ್. ಪರಮೇಶ್ವರಪ್ಪ ಜಿ.ಪಂ ಮಾಜಿ ಅಧ್ಯಕ್ಷ ಹುಚ್ಚೇಗೌಡ, ಜಿಪಂ ಮಾಜಿ ಉಪಾಧ್ಯಕ್ಷ ಬಂಡೀಗೌಡರ ರಾಜಣ್ಣ, ಪರಸಭಾಧ್ಯಕ್ಷ ಮೋಹನ್ ಕುಮಾರ್, ಮಾಜಿ ಪುರಸಭಾಧ್ಯಕ್ಷ ಎನ್.ಎಸ್. ಸಿದ್ದರಾಮಶೆಟ್ಟಿ, ಎ.ಪಿ.ಎಂ.ಸಿ ಅಧ್ಯಕ್ಷ ಅಜ್ಜಪ್ಪ, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಅಣ್ಣಾಯಕನಹಳ್ಳಿ ವಿಜಯ್ ಕುಮಾರ್, ತಾಲೂಕು ಪಂಚಾಯತಿ ಸದಸ್ಯ ಬಿ.ಆರ್. ಜಯಣ್ಣ ನ, ಬಿಜೆಪಿ ಮುಖಂಡ ಬೆಳಗುಂಬ ಲೋಕೇಶ್, ಕಾಂಗ್ರೆಸ್ ಮುಖಂಡ ಅಜ್ಜಪ್ಪ, ಜಾಜೂರು ವಿರುಪಾಕ್ಷಪ್ಪ, ಯಾಧವ ಸಮಾಜದ ಮುಖಂಡರಾದ ಜವನಪ್ಪ, ಸುಬ್ರಮಣ್ಯಬಾಬು ಇನ್ನಿತರರು ಎ. ಕೃಷ್ಣಪ್ಪ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement