ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ನಗರಸಭೆ ಅಕ್ರಮಗಳು ಲೋಕಾ ತನಿಖೆಯಾಗಲಿ

Mainashree
Updated On : 26 Apr 2014, 12:02 pm

ಹಾಸನ: ನಗರಸಭೆ ಆಯುಕ್ತ  ವಿ.ಎಚ್. ಕೃಷ್ಣಮೂರ್ತಿ ಅವರಿಗೆ ನೀಡುತ್ತಿರುವ ಕಿರುಕುಳ ಖಂಡಿಸಿ ಹಾಗೂ ನಗರಸಭೆಯಲ್ಲಿ ನಡೆದಿರುವ ಅಕ್ರಮಗಳನ್ನು ಲೋಕಾಯುಕ್ತ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಶುಕ್ರವಾರ ದಲಿತ ಸಂಘಟನೆಗಳ ಸಂಯುಕ್ತ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿ ಜಮಾಯಿಸಿದ ಕಾರ್ಯಕರ್ತರು ಪ್ರಮುಖ ಬೀದಿಗಳಲ್ಲಿ  ಮೆರವಣಿಗೆ ನಡೆಸಿದ ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಕೆಲ ಕಾಲ ಧರಣಿ ನಡೆಸಿ, ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡಿದರು.
ಪ್ರತಿಭಟನಾಕಾರರ ಪ್ರಶ್ನೆ: ನಗರಸಭೆಗೆ ಆಯುಕ್ತರಾಗಿ ಬಂದಿರುವ ದಲಿತ ಜನಾಂಗಕ್ಕೆ ಸೇರಿದ ಅಧಿಕಾರಿ ಕೃಷ್ಣಮೂರ್ತಿ ದಕ್ಷತೆ ಹಾಗೂ  ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿದ್ದಾರೆ. ಕಾನೂನು ವಿರೋಧಿ ಕೆಲಸ ಮಾಡಲು ಪ್ರೇರಿಪಿಸಿದ ಕೆಲವರಿಗೆ ಆಯುಕ್ತರು ಎಚ್ಚರಿಕೆ ನೀಡಿದ್ದರು. ಆದರೆ, ಅವರ ಈ ದಕ್ಷತೆ ಅವರಿಗೆ ಮುಳುವಾಗಿದೆಯೇ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.
ದೂರು ದಾಖಲಿಸಿ: ನಗರಸಭೆ ಅಕ್ರಮಗಳ ತಾಣವಾಗಿದ್ದು, ಕೂಡಲೇ ನಗರಸಭೆಯನ್ನು ಸೂಪರ್‌ಸೀಡ್ ಮಾಡಬೇಕು. ಆಯುಕ್ತರಿಗೆ ಕಿರುಕುಳ ನೀಡುತ್ತಿರುವವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಬೇಕೆಂದು ಒತ್ತಾಯಿಸಿದರು.
ಎಲ್ಲಾ ಪ್ರಕರಣಗಳ ಬಗ್ಗೆ  ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸದಿದ್ದರೆ ಮುಂದಿನ ದಿನಗಳಲ್ಲಿ ಸಂಘಟನೆ ಈ  ಸಂಬಂಧ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಎಚ್.ಕೆ. ಸಂದೇಶ್, ಬಾಬು ಜಗಜೀವನರಾಂ ಮಾದಿಗ ಮಹಾಸಭಾದ ಅಧ್ಯಕ್ಷ ಎಚ್.ಪಿ. ಶಂಕರ್‌ರಾಜು, ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಎಚ್.ಪಿ. ಪುಟ್ಟರಾಜು, ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ಆರ್‌ಪಿಐ ಸತೀಶ ಹಾಗೂ ಇತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement