ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಮಣ್ಣು ಪರೀಕ್ಷೆ ಅರಿವು ಆಂದೋಲನ

Mainashree
Updated On : 27 Apr 2014, 11:27 am

ಹಾಸನ: ಜೀವ ವೈವಿಧ್ಯ ಸಂರಕ್ಷಣೆ ಮತ್ತು ಸಂಶೋಧನಾ ಸಂಸ್ಥೆ ಯಿಂದ ಮಣ್ಣು ಪರೀಕ್ಷೆ ಮತ್ತು ಅದರ ಮಹತ್ವದ ಬಗ್ಗೆ ಅರಿವು ಮೂಡಿಸಲು ಇತ್ತೀಚೆಗೆ ಅಂಕನಹಳ್ಳಿಯಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕಂದಲಿಯ ಮಣ್ಣು ವಿಜ್ಞಾನಿ ಡಾ. ಚನ್ನಕೇಶವ ರೈತರಿಗೆ ಮಣ್ಣು ಪರೀಕ್ಷೆಯ ಮಹತ್ವ ಮತ್ತು ಮಣ್ಣು ಮಾದರಿಯ ಸಂಗ್ರಹಣೆ ಬಗ್ಗೆ ವಿವರವಾಗಿ ತಿಳಿಸಿದರು. ರೈತರ ತಾಕಿನಲ್ಲಿ ಮಣ್ಣಿನ ಮಾದರಿ ಸಂಗ್ರಹಣೆ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ರಾಜೇಗೌಡರ ಜಮೀನಿನಲ್ಲಿ ತಿಳಿಸಿಕೊಡಲಾಯಿತು.ಮಣ್ಣಿನ ಮಾದರಿಯನ್ನು ಕೃಷಿ ವಿಜ್ಞಾನ ಕೇಂದ್ರಕ್ಕೆ ತಲುಪಿಸಿ, ಕೇವಲ ಒಂದು ವಾರದೊಳಗೆ ಫಲಿತಾಂಶ ಪಡೆಯಬಹುದು. ಇದರಿಂದ ರಾಸಾಯನಿಕ ಗೊಬ್ಬರಗಳ ಸಮರ್ಪಕ ಬಳಕೆ ಸಾಧ್ಯ ಮತ್ತು ಮಣ್ಣಿನ ಆರೋಗ್ಯ ಕಾಪಾಡಬಹುದು ಎಂದರು. ರೈತರು ಕೇವಲ ರಾಸಾಯನಿಕ ಗೊಬ್ಬರಗಳನ್ನು ಬಳಕೆ ಮಾಡದೆ ಸಾವಯವ ಗೊಬ್ಬರಗಳಾದ ಹಸಿರೆಲೆ ಗೊಬ್ಬರ, ಜೈವಿಕ ಗೊಬ್ಬರ ಮತ್ತು ಎರೆಹುಳು ಗೊಬ್ಬರ ಬಳಕೆ ಮಾಡಬೇಕು ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಬಿಸಿಆರ್‌ಟಿ ಸಂಸ್ಥಾಪಕ ಕೃಷ್ಣಮೂರ್ತಿ 2014-15ರ ಕ್ರಿಯಾ ಯೋಜನೆ ನಿರೂಪಿಸಿದರು.  ಕಾರ್ಯಕ್ರಮದಲ್ಲಿ ಅಂಕನಹಳ್ಳಿ ಗ್ರಾಮಸ್ಥರು, ರೈತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತರಬೇತಿಯ ಲಾಭ ಪಡೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement