ಬಸವ ಜಯಂತಿಗೆ ಸಂಹಿತೆ ಬೇಲಿ
ಹಾಸನ: ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಡಳಿತದ ವತಿಯಿಂದ ಮೇ 2ರಂದು ಬಸವ ಜಯಂತಿಯನ್ನು ಸರಳವಾಗಿ ನಗರದ ಸಾಹಿತ್ಯ ಪರಿಷತ್ ಭವನದಲ್ಲಿ ಆಚರಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಶರತ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಬಸವ ಜಯಂತಿ ಆಚರಣೆ ಕುರಿತಂತೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೀತಿ ಸಂಹಿತೆ ಜಾರಿಯಿರುವ ಹಿನ್ನೆಲೆಯಲ್ಲಿ ಮೆರವಣಿಗೆ ಇರುವುದಿಲ್ಲ. ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಗುವುದು ಎಂದರು. ನಗರಸಭೆ ಆಯುಕ್ತ ಕೃಷ್ಣಮೂರ್ತಿ, ತಹಸೀಲ್ದಾರ್ ಮಂಜುನಾಥ್, ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ಪುಟ್ಟರಾಜು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಶಿವಾನಂದ್ ಹಾಗೂ ವೀರಶೈವ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.