ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಮೋದಿ ಪ್ರಧಾನಿಯಾದ್ರೆ ದೇಶಕ್ಕೆ ಮಾರಕ

Mainashree
Updated On : 29 Apr 2014, 9:20 am

ಹಾಸನ: ನರೇಂದ್ರ ಮೋದಿ ಪ್ರಧಾನಿ ಆದರೆ ದೇಶಕ್ಕೆ ಮಾರಕವಾಗಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರೋದಿಲ್ಲ. ದೇಶದಲ್ಲಿ 20 ಕೋಟಿ ಮುಸ್ಲೀಂರು ಹಾಗೂ 10 ಕೋಟಿ ಕ್ರಿಶ್ಚಿಯನ್ ಜನಾಂಗದವರು ಇದ್ದಾರೆ. ಮೋದಿ ಪ್ರಧಾನಿ ಆದ್ರೆ ಈ ಸಮುದಾಯದ ಜನರನ್ನು ಎಲ್ಲಿಗೆ ಕಳುಹಿಸಬೇಕು ಎಂದು ಪ್ರಶ್ನಿಸಿದ ಅವರು, ಮೋದಿ ಪ್ರಧಾನಿ ಆಗೋದನ್ನು ತಡೆಯುವುದಕ್ಕೆ ಯಾರಿಗೇ ಬೇಕಾದರೂ ಬೆಂಬಲವನ್ನು ನೀಡುತ್ತೇವೆ ಎಂದರು.
ಕಾಂಗ್ರೆಸ್‌ಗೆ ಬೆಂಬಲ ನೀಡುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ ಗೌಡರು, ಕಾಂಗ್ರೆಸ್‌ಗೆ ಬೆಂಬಲ ನೀಡಬೇಕಾ ಅಥವಾ ನೀಡಬಾರದಾ ಎಂಬುದನ್ನು ಫಲಿತಾಂಶ ಬಂದ ನಂತರ ತೀರ್ಮಾನಿಸಲಾಗತ್ತದೆ. ಸ್ವಂತ ಬಲದಿಂದ ಕಾಂಗ್ರೆಸ್ ಕೂಡಾ ಅಧಿಕಾರಕ್ಕೆ ಬರೋದಿಲ್ಲ ಎಂದು ಹೇಳಿದರು.
ತೃತೀಯ ರಂಗಕ್ಕೆ ಬೆಂಬಲ ನೀಡುವುದಾಗಿ ಕಾಂಗ್ರೆಸ್ ಮುಖಂಡರ ಹೇಳಿಕೆಗೆ ಪ್ರತಿಕ್ರಿಯಿದ ಅವರು, ತೃತೀಯ ರಂಗಕ್ಕೆ ಬೆಂಬಲ ನೀಡುವುದಾಗಿ ಕಾಂಗ್ರೆಸ್ ಮುಖಂಡರ ಈ ರೀತಿ ಹೇಳಿಕೆಯು ಬಿಜೆಪಿಗೆ ಪರೋಕ್ಷವಾಗಿ ಅನುಕೂಲವಾಗಲಿದೆ. ಅವರು ಏತಕ್ಕೆ ಈ ರೀತಿ ಹೇಳಿಕೆ ನೀಡಿದ್ದಾರೆ ಅಂತ ನನಗೆ ತಿಳಿದಿಲ್ಲ ಎಂದರು.
ಮುಲಾಯಂ ಸಿಂಗ್ ಯಾದವ್ ಅವರು ಮುಸ್ಲಿಮರಿಗೆ ಮೀಸಲಾತಿ ನೀಡುವುದಾಗಿ ಹೇಳಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೌಡರು, ಈ ಹೊತ್ತಿನಲ್ಲಿ ಈ ಹೇಳಿಗೆ ಅಪ್ರಸ್ತುತ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement