ತಂತ್ರಜ್ಞಾನ ರಾಷ್ಟ್ರೀಯಸಮ್ಮೇಳನ 5ರಂದು
ಹಾಸನ: ನಗರದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಆಂಡ್ ಎಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ ಟೆಕ್ವಿಪ್-2 ಸಹಯೋಗದೊಂದಿಗೆ ಎರಡು ದಿನಗಳ ಮಲ್ಟಿಮೀಡಿಯ ಟೆಕ್ನಾಲಜಿ ಮತ್ತು ಕಮ್ಯುನಿಕೇಷನ್ ಸಿಸ್ಟಮ್ (ಃಈಂಖಿಈಖ -2014) ಎಂಬ ರಾಷ್ಟ್ರೀಯ ಸಮ್ಮೇಳನವನ್ನು ಮೇ 5 ಮತ್ತು 6ರಂದು ನಗರದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.
ಈ ಸಮ್ಮೇಳನವು ಬೋಧಕರಿಗೆ, ಸಂಶೋಧನಾ ವಿದ್ಯಾರ್ಥಿಗಳಿಗೆ, ಸ್ನಾತ ಕೋತ್ತರ ಪದವೀಧರರಿಗೆ, ಪದವೀಧರರಿಗೆ, ವಿದ್ಯಾರ್ಥಿಗಳಿಗೆ ಮತ್ತು ಕೈಗಾರಿಕಾ ಉದ್ಯಮಿಗಳಿಗೆ ಇತ್ತೀಚಿನ ದಿನಗಳಲ್ಲಿ ಮಲ್ಟಿಮೀಡಿಯ ಟೆಕ್ನಾಲಜಿ ಮತ್ತು ಕಮ್ಯುನಿಕೇಷನ್ ಸಿಸ್ಟಮ್‌ನಲ್ಲಿ ಕಂಡುಕೊಳ್ಳಲಾದ ವೈಜ್ಞಾನಿಕ ಬೆಳವಣಿಗೆ ಮತ್ತು ಸಂಶೋಧನೆಗಳನ್ನು ಚರ್ಚಿಸಲು ಒಂದು ಅತ್ಯುತ್ತಮ ವೇದಿಕೆಯಾಗಲಿದೆ.
ಈ ಸಮ್ಮೇಳನದ ಉದ್ಘಾಟನೆಯನ್ನು ಪೂನಾದ ಉಐಆಖಿ, ಉಜಜಟಜಜ ್ಖಟ್ಝಿಢಜ್ಠಡ್ಝಡಿಣಯ ಮಾಜಿ ಉಪಕುಲಪತಿ ಡಾ. ಎಲ್.ಎನ್. ಪಟ್ನಾಯಕ್ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿಯ ಅಧ್ಯಕ್ಷ ಅಶೋಕ್ ಹಾರ್ನಹಳ್ಳಿ ವಹಿಸಲಿದ್ದಾರೆ. ಕುವೆಂಪು ವಿಶ್ವ ವಿದ್ಯಾಲಯದ ಮಾಜಿ ಕುಲಪತಿ ಡಾ.ಕೆ. ಚಿದಾನಂದಗೌಡ ಮುಖ್ಯ ಭಾಷಣ ಮಾಡಲಿದ್ದಾರೆ.
ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿಯ ಉಪಾಧ್ಯಕ್ಷ ಬಿ.ಬಿ.ಶಿವಪ್ಪ, ಕಾರ್ಯದರ್ಶಿ ಆರ್.ಟಿ. ದ್ಯಾವೇಗೌಡ, ಖಜಾಂಚಿ ಆರ್.ಶೇಷಗಿರಿ, ವಿದ್ಯಾ ಲಯದ ಪ್ರಾಂಶುಪಾಲ ಡಾ. ಕೆ.ಎಸ್. ಜಯಂತ್, ಉಪಪ್ರಾಂಶುಪಾಲ ಡಾ. ಎಂ.ಎಸ್. ರವಿಪ್ರಕಾಶ್, ಸಮ್ಮೇಳನದ ಮುಖ್ಯ ರುವಾರಿ ಮತ್ತು ವಿಭಾಗದ ಮುಖ್ಯಸ್ಥರಾದ ಡಾ.ಬಿ. ರಮೇಶ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.