ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ವ್ಯಕ್ತಿ ಮೇಲೆ ಕರಡಿ ದಾಳಿ

Mainashree
Updated On : 1 May 2014, 12:04 pm

ಕ.ಪ್ರ.ವಾರ್ತೆ  ಅರಸೀಕೆರೆ  ಏ.30
ತಾಲ್ಲೂಕಿನ ಕಣಕಟ್ಟೆ ಹೋಬಳಿ ಕಲ್ಲುಸಾದರಹಳ್ಳಿ ಗ್ರಾಮದಲ್ಲಿ ರೈತನೊಬ್ಬ ತೋಟಕ್ಕೆ ಹೊಗುತ್ತಿದ್ದ ವೇಳೆ ಕರಡಿಯೊಂದು ಹಠಾತ್ತನೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ಗ್ರಾಮದ ತಿಮ್ಮಪ್ಪ ಎಂಬುವವರ ಮಗ ನಾಗರಾಜು (50) ಗಾಯಗೊಂಡ ದುರ್ದೈವಿ.
ಈತ ಮುಂಜಾನೆ ಎಂದಿನಂತೆ ತೋಟಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಪೊದೆಯಲ್ಲಿ ಅಡಗಿದ್ದ ಕರಡಿಯೊಂದು ದಿಢೀರನೆ ಮೇಲೆರಗಿ ಉಗುರುಗಳಿಂದ ತಲೆ, ಮುಖ, ಕಿವಿಗಳನ್ನು ಪರಚಿದೆ ಹಾಗೂ ಪಕ್ಕೆ ,ಕೈ,ಕಾಲು, ಹೊಟ್ಟೆಯ ಭಾಗವನ್ನು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ. ದಾಳಿಯಿಂದ ಗಾಬರಿಗೊಂಡ ಈತ ಸಹಾಯಕ್ಕಾಗಿ ಕೂಗಿಕೊಂಡಾಗ ಅಕ್ಕಪಕ್ಕದ ಜಮೀನಿನಲ್ಲಿದ್ದ ರೈತರು ಆಗಮಿಸಿ ಬೆದರಿಸಿದಾಗ ಕರಡಿ ಅಲ್ಲಿಂದ ಪರಾರಿಯಾಗಿದೆ.
ಗಾಯಾಳುವನ್ನು ತಕ್ಷಣ ಪಟ್ಟಣದ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಗ್ರಾಮಸ್ಥರ ಆಕ್ರೋಶ
ತಾಲ್ಲೂಕಿನ ಕಣಕಟ್ಟೆ ಹೋಬಳಿ ಸುತ್ತಮುತ್ತ ಅಕ್ರಮ ಕಲ್ಲುಗಣಿಗಾರಿಕೆ ಅವಕಾಶ ನೀಡಿರುವುದರಿಂದ ಕಲ್ಲು ಬಂಡೆ ಸಿಡಿಸಲು ಮದ್ದುಗುಂಡುಗಳನ್ನು ಉಪಯೋಗಿಸುತ್ತಿರುವುದರಿಂದ ಅದರ ಶಬ್ದಕ್ಕೆ ಬೆದರಿ ಕರಡಿಗಳು ಕಾಡಿನಿಂದ ನಾಡಿಗೆ ಹೋರಬಂದು ಇಂತಹ ದಾಳಿಗಳು ಇತ್ತೀಚೆಗೆ ದಾಳಿಯಂತಹ ಪ್ರಕರಣಗಳು ಪದೇ ಪದೇ ಮರುಕಳಿಸಲು ಕಾರಣವಾಗಿದೆ. ಆದರೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕಾದರೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಕೂಡಲೇ ಅಕ್ರಮ ಕಲ್ಲು ಗಣಿಗಾರಿಕೆ ತಡೆಗಟ್ಟಬೇಕು. ಅಮಾಯಕರ ಪ್ರಾಣ ರಕ್ಷಿಸಬೇಕು ಇಲ್ಲದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement