ಹಾಸನ

ನೇಮಕ ಅವ್ಯವಹಾರ ಆರೋಪ ನಿರಾಧಾರ

ಬೇಲೂರು: ನಾರ್ವೆ ಗ್ರಾಪಂಚಾಯ್ತಿಯಲ್ಲಿ ಕರವಸೂಲಿಗಾರರ ಹುದ್ದೆಗೆ ಸದಸ್ಯರು ಮತ್ತು ಅಧಿಕಾರಿಗಳು ಹಣ ಪಡೆದುಕೊಂಡಿದ್ದಾರೆಂದು ಆರೋಪಿಸಿ ರುವ ಕೆಲ ಸಂಘಟನೆಗಳು ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ. ಇವರು ಸುಳ್ಳು ಹೇಳಿಕೆಗಳನ್ನು ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಗ್ರಾಪಂ ಸದಸ್ಯ ಅನಿಲ್ ಕುಮಾರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾಮಾನ್ಯ ಸಭೆಯಲ್ಲಿ ಅನುಮೋದಿಸಿ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಅಧಿಕಾರಿಗಳಿಂದ ಅನುಮತಿ ಪಡೆದು ಕರವಸೂಲಿಗಾರ ಹುದ್ದೆ ತುಂಬಲು ಪತ್ರಿಕೆಯಲ್ಲಿ ಪ್ರಕಟಣೆ ಹೊರಡಿಸಿ, ಅರ್ಜಿ ಆಹ್ವಾನಿಸಲಾಯಿತು. 12 ಜನ ಅಭ್ಯರ್ಥಿಗಳು ಅರ್ಜಿ ಹಾಕಿದ್ದರು. ಪರಿಶಿಷ್ಟರಿಗೆ ಆದ್ಯತೆ ಇತ್ತು. ಆದರೆ ಆ ವರ್ಗದದಿಂದ ಯಾರೂ ಅರ್ಜಿ ಹಾಕದ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಯ ಅಭ್ಯರ್ಥಿಯನ್ನು ಆಯ್ಕೆ ಮಾಡಲು ತೀರ್ಮಾನಿಸಲಾಯಿತು ಎಂದರು. ಇದರಲ್ಲಿ ಕೊನೆಯದಾಗಿ ನಾರಾಯಣ, ಮತ್ತು ತಮ್ಮಣ್ಣ ಎಂಬುವವರು ಉಳಿದರು. ಈಗಾಗಲೆ ತಮ್ಮಣ್ಣ ಎಂಬುವವರು ನಾರ್ವೆ ಗ್ರಾಪಂನಲ್ಲಿ ನರೇಗ ಯೋಜನೆಯಲ್ಲಿ ಕೆಲಸ ಮಾಡಿ, ಟಿಡಿ ಹಳ್ಳಿಯಲ್ಲಿಯೂ ಕೆಲಸ ಮಾಡಿ ಅರ್ಧಕ್ಕೆ ಬಿಟ್ಟು ಹೋದ ನಿದರ್ಶನವಿದೆ. ಮತ್ತೊಬ್ಬ ಅಭ್ಯರ್ಥಿ ನಾರಾಯಣ ಎಂಬುವವರು ನಾರ್ವೆ ಗ್ರಾಪಂಗೆ ಸಮೀಪದಲ್ಲಿದ್ದು, ನಿರುದ್ಯೋಗಿಯಾಗಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ, ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ