ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಮನೆ ಕಳೆದುಕೊಂಡವರಿಗೆ ನಿವೇಶನ

Rashmi Kasaragodu
Updated On : 2 Aug 2014, 12:44 pm

ಸಕಲೇಶಪುರ: ಪಟ್ಟಣದಲ್ಲಿ ಮಳೆಯಿಂದ ಉಂಟಾದ ಭೂಕುಸಿತದಿಂದ ಮನೆ ಕಳೆದುಕೊಂಡಿರುವ ಜನರಿಗೆ ಪುರಸಭೆ ವತಿಯಿಂದ ಹೂಸ ನಿವೇಶನಗಳನ್ನು ನೀಡಲಾಗುವುದು ಎಂದು ಶಾಸಕ ಎಚ್.ಕೆ ಕುಮಾರಸ್ವಾಮಿ ಹೇಳಿದ್ದಾರೆ.
ಪಟ್ಟಣದ ಕುಶಾಲನಗರ ಬಡಾವಣೆಯಲ್ಲಿ ಭೂಕುಸಿತ ಸಂಭವಿಸಿರುವ ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿದ ನಂತರ ಮಾತನಾಡಿ, ಬಡಾವಣೆಯಲ್ಲಿ ಭೂಕುಸಿತ ಸಂಭವಿಸಿರುವುದರಿಂದ ಸುಮಾರು 10ಕ್ಕೂ ಹೆಚ್ಚು ಮನೆಗಳು ಹಾನಿಗೊಂಡಿದ್ದು, ಅವರನ್ನು ಬೇರೆ ಪ್ರದೇಶಕ್ಕೆ ಸ್ಥಳಾಂತರಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದೆನೆ. ಆದ್ದರಿಂದ ಸಂತ್ರಸ್ತ ಕುಟುಂಬಗಳು ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದರು.
ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ಎಂದಿಗೂ ಅನ್ಯಾಯವಾಗದ ರೀತಿಯಲ್ಲಿ ನಿವೇಶನದೊಂದಿಗೆ ವಾಜಿಪೇಯಿ ವಸತಿಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಳ್ಳಲು ಸಹಾಯಧನ ನೀಡಲಾಗುವುದು  ಎಂದರು.
ಈ ಬಡಾವಣೆಯಲ್ಲಿ ನಿರ್ಮಿಸಲಾಗಿರುವ ಬಹುತೇಕ ತಡೆಗೋಡೆಗಳು ಕಳಪೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದ್ದು ತನಿಖೆ ನಂತರ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಸಂತೋಷ್ ಕುಮಾರ್ ಜೈನ್, ಮುಖ್ಯಾಧಿಕಾರಿ ನಾಗಶೆಟ್ಟಿ ಮುಂತಾದವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement