ಹಾಸನ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜನ ಜಾನುವಾರು ಹಾಗೂ ಸಾರ್ವಜನಿಕ ಆಸ್ತಿ ಹಾನಿ ನಿಯಂತ್ರಣಕ್ಕೆ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಅಪಾಯದ ಅಂಚಿನಲ್ಲಿರುವ ಸಕಲೇಶಪುರ ತಾಲೂಕಿನ ಕೆಲವು ಮನೆಗಳನ್ನು ಸ್ಥಳಾಂತರಿಸಲು ಕ್ರಮ ವಹಿಸಲಾಗಿದೆ. ಸಾರ್ವಜನಿಕರ ನೆರವಿಗಾಗಿ ದಿನದ 24 ಗಂಟೆಗಳ ಕಾಲವೂ ಜಿಲ್ಲಾಧಿಕಾರಿ ಕಚೇರಿಯ ಪ್ರಕೃತಿ ವಿಕೋಪ ಶಾಖೆಯ ಕಂಟ್ರೋಲ್ ರೂಂ ಕಾರ್ಯ ನಿರ್ವಹಿಸುವಂತೆ ವ್ಯವಸ್ಥೆ ಮಾಡಲಾಗಿದೆ. ಮಳೆಯಿಂದ ಜನ-ಜಾನುವಾರುಗಳಿಗೆ ಹಾಗೂ ಸಾರ್ವಜನಿಕ ಆಸ್ತಿ ಮತ್ತು ಬೆಳೆ ಹಾನಿಯಾಗಿದ್ದಲ್ಲಿ ಜಿಲ್ಲಾಧಿಕಾರಿಯವರ ಕಚೇರಿ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 08172-261111 ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿಯವರು ಕೋರಿದ್ದಾರೆ.