ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಹೌಸಿಂಗ್ ಬೋರ್ಡ್‌ಗೆ ಸೌಲಭ್ಯ ಕಲ್ಪಿಸಲು ಆಗ್ರಹ

Rashmi Kasaragodu
Updated On : 2 Aug 2014, 12:51 pm

ಹಾಸನ: ನಗರದ ಹೊಸ ಬಸ್‌ನಿಲ್ದಾಣದ ಎದುರು ಇರುವ ಹೌಸಿಂಗ್‌ಬೋರ್ಡ್ ಕಾಲೋನಿಗೆ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಹಾಸನಾಂಬ ನಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಗೋಪಾಲ ಮತ್ತು ಉಪಾಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ ಆಗ್ರಹಿಸಿದ್ದಾರೆ. ಕರ್ನಾಟಕದ ಗೃಹಮಂಡಳಿಯಿಂದ ಲೇಔಟ್ ನಿರ್ಮಾಣ ಮಾಡಿ, ಮಂಡಳಿವತಿಯಿಂದ 200 ಮನೆಗಳನ್ನು ನಿರ್ಮಿಸಿ, ಫಲಾನುಭವಿಗಳಿಗೆ ವಿತರಣೆ ಮಾಡಿ ನಾಲ್ಕು ವರ್ಷ ಕಳೆದಿರುತ್ತದೆ. ಖಾಲಿ ನಿವೇಶನಗಳಲ್ಲಿ ಸುಮಾರು 250 ಮನೆಗಳನ್ನು ನಿರ್ಮಿಸಿ ಜನರು ವಾಸವಿರುತ್ತಾರೆ. ಆದರೆ ಈ ಬಡಾವಣೆಗೆ ಗೃಹ ಮಂಡಳಿಯವರು ಯಾವುದೇ ಮೂಲಭೂತ ಸೌಕರ್ಯ ಕಲ್ಪಿಸದೆ ನಿರ್ಲಕ್ಷಿಸಿದ್ದಾರೆ ಎಂದು ದೂರಿದ್ದಾರೆ. ಈ ಬಡಾವಣೆಗೆ ವಾರಕ್ಕೊಮ್ಮೆ ಕುಡಿಯುವ ನೀರು ಬಿಡುತ್ತಿದ್ದು, ರಾತ್ರಿ ವೇಳೆ ಬೀದಿ ದೀಪಗಳಿಲ್ಲ. ಮುಖ್ಯ ರಸ್ತೆಯಲ್ಲೇ ತಿರುಗಾಡಲು ಸಾಧ್ಯವಾಗುತ್ತಿಲ್ಲ. ರಸ್ತೆ ಬದಿ ಮತ್ತು ಖಾಲಿ ನಿವೇಶಗಳಲ್ಲಿ ಪೊದೆಗಳು ಬೆಳೆದು ಕಳ್ಳರ ಅಡಗುತಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಗೃಹ ಮಂಡಳಿಗೆ ಅನೇಕ ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಬಡಾವಣೆ ನಿವಾಸಿಗಳ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement