17ಕ್ಕೆ ಸರ್ದಾರ್ಪಟೇಲ್ ಪುತ್ಥಳಿಗೆ ಭೂಮಿ ಪೂಜೆ
ಹಾಸನ: ಬೀದರ್ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಗೊರಟಾ ಗ್ರಾಮದಲ್ಲಿ ಸರ್ದಾರ್ ವಲ್ಲಭ ಭಾಯಿ ಪಟೇಲ್ ಪ್ರತಿಮೆ ನಿರ್ಮಾಣಕ್ಕೆ ಸೆ.17 ರಂದು ಭೂಮಿ ಪೂಜೆ ನಡೆಯಲಿದೆ ಎಂದು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಚನ್ನಕೇಶವ ತಿಳಿಸಿದ್ದಾರೆ.
ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಿಜೆಪಿ ಯುವ ಮೋರ್ಚಾದಿಂದ ಗೊರಟಾ ಹುತಾತ್ಮ ಸ್ಮಾರಕ ಮತ್ತು ಸರ್ದಾರ್ ವಲ್ಲಭ ಭಾಯಿ ಪಟೇಲ್ ಪುತ್ಥಳಿ ನಿರ್ಮಾಣಕ್ಕಾಗಿ ನಿಧಿ ಸಂಗ್ರಹ ಮಾಡಲಾಗುತ್ತಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.