ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ರಂಗನಾಥಸ್ವಾಮಿ ದೇಗುಲ ಲೋಕಾರ್ಪಣೆ ಇಂದು

Rashmi Kasaragodu
Updated On : 4 Aug 2014, 11:38 am

ಕ.ಪ್ರ.ವಾರ್ತೆ, ಅರಸೀಕೆರೆ, ಆ.4
ಮುಜರಾಯಿ ಇಲಾಖೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಮಿತಿ, ಸಂಕೋಡನಹಳ್ಳಿ ಗ್ರಾಮಸ್ಥರು ಹಾಗೂ ಭಕ್ತಾಧಿಗಳ ಉದಾರ ನೆರವಿನಿಂದ ಸುಮಾರು 150 ವರ್ಷಗಳ ಇತಿಹಾಸವುಳ್ಳ ಸುಕ್ಷೇತ್ರ ರಂಗನಾಥಸ್ವಾಮಿ ದೇಗುಲ ಜೀರ್ಣೋದ್ಧಾರಗೊಂಡಿದ್ದು ಆ.5ರಂದು ಲೋಕಾರ್ಪಣೆಗೊಳ್ಳಲಿದೆ ಎಂದು  ದೇಗುಲ ಜೀರ್ಣೋದ್ಧಾರದ ನಿರ್ವಹಣೆ ಹೊತ್ತಿರುವ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಎಸ್.ಟಿ.ವಿರುಪಾಕ್ಷಪ್ಪ ತಿಳಿಸಿದ್ದಾರೆ.
 ಸುಮಾರು 8-10 ಲಕ್ಷ  ರುಗಳಿಗೂ  ಅಧಿಕ ಹಣ ವಿನಿಯೋಗಿಸಿ ದೇಗುಲ ಜೀರ್ಣೋದ್ಧಾರ ಮಾಡಲಾಗಿದೆ. ಆ.5ರ ಸಂಜೆ  ಗಂಗಾ ತರುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಬುಧವಾರ ಬೆಳಗ್ಗೆ 5.30ರಿಂದ 6.30ರಲ್ಲಿ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ತಮ್ಮಡಿಹಳ್ಳಿ ಮಠದ ಡಾ.ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಸ್ವಾಮೀಜಿ ಕಳಸಾರೋಹಣ ನೆರವೇರಿಸಲಿದ್ದಾರೆ. ಅಂದು ಹರಗುರು ಚರಮೂರ್ತಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು ಆಶೀರ್ವಚನ ಏರ್ಪಡಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement