ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ತೋಟಗಾರಿಕೆ ಇಲಾಖೆಯಿಂದ ತಾರಸಿ ತೋಟಗಳ ಕಾರ್ಯಕ್ರಮ

Rashmi Kasaragodu
Updated On : 2 Feb 2014, 12:45 pm

ಹಾಸನ: ತೋಟಗಾರಿಕೆ ಇಲಾಖೆ ವತಿಯಿಂದ 2013-14ನೇ ಸಾಲಿನ  ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೈ ತೋಟ ಮತ್ತು ತಾರಸಿ ತೋಟಗಳ ಉತ್ತೇಜನ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಡಿ ಹಾಸನ ನಗರ ಪ್ರದೇಶದಲ್ಲಿ ವಾಸಿಸುತ್ತಿರುವ ನಾಗರಿಕರಿಗೆ ಸಮತೋಲನ ಆಹಾರ ಒದಗಿಸಲು ಹಣ್ಣು ಮತ್ತು ತರಕಾರಿಯನ್ನು ತಾರಸಿ ಮತ್ತು ಕೈ ತೋಟದಲ್ಲಿ ಸ್ವತಃ ಬೆಳೆಸಿಕೊಳ್ಳಲು, ಕುಟುಂಬದ ಸದಸ್ಯರು, ಅದರಲ್ಲೂ ಮಹಿಳೆಯರು ಮತ್ತು ಮಕ್ಕಳಲ್ಲಿ ತಾರಸಿ ಮತ್ತು ಕೈ ತೋಟಗಳಲ್ಲಿ ಆಸಕ್ತಿ ಮೂಡಿಸಿ, ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಅರಿವು, ಆಸಕ್ತಿ, ಉತ್ತೇಜನ ಮೂಡಿಸುವ ಸಲುವಾಗಿ ತೋಟಗಾರಿಕೆ ಇಲಾಖೆ ವತಿಯಿಂದ ಆಸಕ್ತ ಸಾರ್ವಜನಿಕರಿಗೆ ನೋಂದಣಿ ಮಾಡಿಸಲಾಗುತ್ತಿದೆ. ಆಸಕ್ತ ನಾಗರಿಕರಿಗೆ ಇಲಾಖೆ ವತಿಯಿಂದ ಉಚಿತವಾಗಿ ತರಕಾರಿ ಸಸಿಗಳು, ಬೀಜಗಳನ್ನು ವಿತರಿಸಲಾಗುವುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement