ಮಹಿಳೆಯರಿಗೆ ಕರಾಟೆ ತರಬೇತಿ
ಸಕಲೇಶಪುರ: ಪಟ್ಟಣ ಪೊಲೀಸ್ ಠಾಣೆ ಡಿವೈಎಸ್ಪಿ ನೇತೃತ್ವದಲ್ಲಿ ನಗರ ಪೊಲೀಸ್ ಠಾಣೆಯ ಅವರಣದಲ್ಲಿ ಒಂದು ವಾರ ಕಾಲ ಮಹಿಳೆಯರಿಗೆ ಉಚಿತ ಕರಾಟೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಫೆ. 1ರಿಂದ 7 ರವರಗೆ ನಡೆಯಲಿರುವ ಉಚಿತ ಕರಾಟೆ ತರಬೇತಿಗೆ ಹಾಜರಾಗಲು ಆಸಕ್ತಿ ಇರುವ ಮಹಿಳೆಯರು ಸಕಲೇಶಪುರ ನಗರ ಪೊಲೀಸ್ ಠಾಣೆಗೆ ಬಂದು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.