ಬಿಜೆಪಿ ಟಿಕೆಟ್; ಸ್ಥಳೀಯರಿಗೆ ಆದ್ಯತೆ
ಕನ್ನಡಪ್ರಭ ವಾರ್ತೆ ಹಾಸನ ಫೆ.2
ಬಿಜೆಪಿ ಎಸ್ಸಿ-ಎಸ್ಟಿ ಸ್ಲಂ ಮೋರ್ಚಾ ಕಾರ್ಯಕಾರಣಿ ಸಮಿತಿ ಸಭೆ ಭಾನುವಾರ ನಡೆಯಿತು. ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವ ಹಾಗೂ ಎಸ್ಸಿ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ಎ.ನಾರಾಯಣಸ್ವಾಮಿ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಸ್ಥಳೀಯ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುತ್ತದೆ. ಅಲ್ಲದೆ ಎಂಪಿ ಚುನಾವಣೆಗೆ ಅಭ್ಯರ್ಥಿಯನ್ನು ಹೊರಗಡೆಯವರಿಗೆ ಅವಕಾಶ ಇಲ್ಲ. ಸ್ಥಳೀಯರಿಗೆ ಅವಕಾಶ ಕಲ್ಪಿಸಲಾಗುವುದು ಎಂದರು.
ಫೆ.23 ರಂದು ದಲಿತ, ಹಿಂದುಳಿದ, ಸ್ಲಂ ಮತ್ತು ಎಸ್ಟಿ ಮೋರ್ಚಾ ಕಾರ್ಯಕರ್ತರ ಸಮಾವೇಶವನ್ನು ತುಮಕೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.
ಕಾಂಗ್ರೆಸ್ ಸರ್ಕಾರದ ಭ್ರಷ್ಟಚಾರ ವಿಚಾರ ಹಾಗೂ ಸಿದ್ದರಾಮಯ್ಯ
ಹಿಂದುಳಿದ ಸಮುದಾಯದ ನಿರ್ಲಕ್ಷ್ಯವನ್ನು ಬಹಿರಂಗಪಡಿಸಿ ಹಾಗೂ ಗುಜರಾತ್ ಮುಖ್ಯಮಂತ್ರಿ ಮೋದಿ ಸಾಧನೆಯನ್ನು ಮತದಾರರಿಗೆ ತಿಳಿಸುವ ಪ್ರಯತ್ನ ಮಾಡಲಾಗುವುದು. ಮಹಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸುವ ಕಾರ್ಯಪಡೆಯನ್ನು ಸಿದ್ದಪಡಿಸಲಾಗುತ್ತಿದೆ. ಆದ್ದರಿಂದ ಕಾರ್ಯಕರ್ತರ ಶ್ರಮಿಸುವಂತೆ ಮನವಿ ಮಾಡಿದರು. ಇದೇ ವೇಳೆ ಕೆಜಿಪಿ ಮುಖಂಡ ನಿರ್ವಹಣಯ್ಯ ಬಿಜೆಪಿಗೆ ಸೇರ್ಪಡೆಗೊಂಡರು. ಬಿಜೆಪಿ ಜಿಲ್ಲಾಧ್ಯಕ್ಷ ರೇಣುಕುಮಾರ್, ಉಪಾಧ್ಯಕ್ಷ ಭಾಸ್ಕರ್ರಾವ್, ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ನವಿಲೆ ಅಣ್ಣಪ್ಪ, ನಗರಸಭೆ ಮಾಜಿ ಸದಸ್ಯ ಡಿ.ಪ್ರಸನ್ನಕುಮಾರ್, ಬಿಜೆಪಿ ಮಾಜಿ ಅಧ್ಯಕ್ಷ ಎಂ.ಎಸ್.ಕೃಷ್ಣೇಗೌಡ, ಆಡವಳ್ಳಿ ಪ್ರಕಾಶ್, ಎಸ್ಸಿ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.