ರಾಜ್ಯದಲ್ಲಿ ಬಿಜೆಪಿ ಗೆಲವು ನಿಶ್ಚಿತ: ನಾರಾಯಣಸ್ವಾಮಿ
ಹಾಸನ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಜಯಗಳಿಸುವುದು ನಿಶ್ಚಿತ ಎಂದು ಮಾಜಿ ಸಚಿವ ಎ. ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.
ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತ, ಭ್ರಷ್ಟಾಚಾರದ ಬಗ್ಗೆ ಬಿಜೆಪಿ ವತಿಯಿಂದ ಪ್ರತಿ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು ಜನರಿಗೆ ಅರಿವು ಮೂಡಿಸಲಾಗುತ್ತಿದೆ. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದಿದ್ದರೂ ಆಡಳಿತ ಚುರುಕುಗೊಂಡಿಲ್ಲ ಎಂದು ಆರೋಪಿಸಿದರು.
ಇಂದು ಕೋರ್ ಕಮಿಟಿ ಸಭೆ: ಫೆ.3ಕ್ಕೆ ಕೋರ್ ಕಮಿಟಿ ಸಭೆ ಇದ್ದು, ಈ ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು. ಸ್ಲಂ ಮೋರ್ಚಾ ರಾಜ್ಯ ಕಾರ್ಯಕಾರ್ರಿ ಕುಮಾರಸ್ವಾಮಿ, ಜಿಲ್ಲಾಧ್ಯಕ್ಷ ರೇಣುಕುಮಾರ್, ಮುಖಂಡರಾದ ನವಿಲೆ ಅಣ್ಣಪ್ಪ ಇದ್ದರು.